ಲಕ್ಷ್ಮೇಶ್ವರ: ಈ ಸಾಲಿನ ಅಯವ್ಯಯದಲ್ಲಿ ಗದಗ ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರಕಾರದಿಂದ ಅನುದಾನ ಮೀಸಲಿಡಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಮಾನ್ಯ ಬಿ.ಎಸ್.ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದರು.

ಗದಗ-ಯಲವಿಗಿ ರೈಲು ಮಾರ್ಗ ನಿರ್ಮಾಣಕ್ಕಾಗಿ ಕೇಂದ್ರ ಸರಕಾರ 4 ವರ್ಷಗಳ ಹಿಂದೆಯೇ 640 ಕೋಟಿ ಘೋಷಣೆ ಮಾಡಿದೆ. ಆದರೆ, ರಾಜ್ಯ ಸರಕಾರದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಮಹತ್ವಾಕಾಂಕ್ಷಿ ಯೋಜನೆ ನೆನೆಗುದಿಗೆ ಬಿದ್ದಿದೆ. ಗದಗ-ಯಲವಿಗಿ ಮಧ್ಯದ 55 ಕಿಮೀ ರೈಲು ಮಾರ್ಗ ನಿರ್ಮಾಣವಾಗದೇ ಜಿಲ್ಲೆಯ ಜನ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ತೆರಳುವ ಬದಲು ನೇರವಾಗಿ ಯಲವಿಗಿ ಮಾರ್ಗವಾಗಿ ಹಾವೇರಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಬಹುದು. ಇದರಿಂದ 100 ಕಿ.ಮೀ ಅಂತರ ಕಡಿಮೆಯಾಗಲಿದೆ.

ರೈಲ್ವೆ ಮಾರ್ಗ ನಿರ್ಮಾಣವಾದಲ್ಲಿ ವ್ಯಾಪಾರ ವಹಿವಾಟಿಗೆ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಹಾಗೂ ಈ ಭಾಗದ ಸುತ್ತಮುತ್ತಲಿನ ಗ್ರಾಮದ ಜನರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಕೂಡಲೇ ಗದಗ-ಯಲವಿಗಿ ರೈಲು ನಿರ್ಮಾಣ ಮಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.

Leave a Reply

Your email address will not be published. Required fields are marked *

You May Also Like

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ

ಗದಗ: ಕನ್ನಡ ಜಾನಪದ ಪರಿಷತ ಬೆಂಗಳೂರು ಜಿಲ್ಲಾ ಘಟಕ ಗದಗ ಇವರ ಆಶ್ರಯದಲ್ಲಿ ನವೆಂಬರ 17 ರಂದು ಸಾಯಂಕಾಲ 5-30 ಗಂಟೆಗೆ ಗದಗ ನಗರದ ಬಣ್ಣದ ಮನೆ ಆರ್ಟ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ,

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

2020ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2020’ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು…