ಸಿಇಟಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ : ಸಂಪೂರ್ಣ ಮಾಹಿತಿ

ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಆಯ್ಕೆಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿ ಪ್ರಕಟವಾಗಿದೆ.
ರಾಜ್ಯದಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ, ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಹಾಗೂ ಇತರೆ ರಾಜ್ಯಗಳ ಸಿಇಟಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗಿದ್ದು, ಜುಲೈ 7 ರಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದೆ. ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಕನ್ನಡ ಪರೀಕ್ಷೆಯನ್ನು ಬರೆಯಲಿದ್ದಾರೆ. ಜು.7 ರಂದು ಬೆಳಗ್ಗೆ 10.30 ರಿಂದ 11.50ರ ವರೆಗೆ ಜೀವವಿಜ್ಞಾನ, ಮದ್ಯಾಹ್ನ 2.30 ರಿಂದ 3.50ರ ವರೆಗೆ ಗಣಿತ ಪರೀಕ್ಷೆ ನಡೆಯಲಿದ್ದು, ಜು.8 ರಂದು ಬೆಳಗ್ಗೆ 10.30 ರಿಂದ 11.50ರ ವರೆಗೆ ಭೌತ ವಿಜ್ಞಾನ, ಮದ್ಯಾಹ್ನ 2.30 ರಿಂದ 3.50ರ ವರೆಗೆ ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜು.9 ಬೆಳಗ್ಗೆ 11.30 ರಿಂದ ಮದ್ಯಾಹ್ನ 12.30ರ ವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

Exit mobile version