ನವದೆಹಲಿ: ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಸಚಿವ ನಿತಿನ್ ಗಡ್ಕರಿ ಸಲಹೆ ನೀಡಿದ್ದಾರೆ.

ಲಾಂಚ್ ಗೋ ಎಲೆಕ್ಟ್ರಿಕ್ ಅಭಿಯಾನದಲ್ಲಿ ಮಾತನಾಡಿದ ಅವರು,
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಲ್ಲಾ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸುವುದಾಗಿ ಘೋಷಿಸಿದ್ದಾರೆ.

ಭಾರತದ ತೈಲ ಆಮದು ಅವಲಂಬನೆ ಕಡಿತಗೊಳಿಸುವ ಪ್ರಯತ್ನದಲ್ಲಿ ಇತರ ಇಲಾಖೆಗಳು ಕೂಡ ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಬೇಕು.
ಅಡುಗೆ ಅನಿಲ ದರ ಭಾರಿ ದುಬಾರಿಯಾಗಿದೆ. ಅಡುಗೆಗಾಗಿ ಆಮದು ಮಾಡಿದ ದುಬಾರಿ ಅನಿಲ ಖರೀದಿಸುವ ಬದಲು ವಿದ್ಯುತ್ ಒಲೆ ಉಪಕರಣಗಳನ್ನು ಖರೀದಿಸಲು ಸಹಾಯಧನ ನೀಡುವಂತೆ ಸಲಹೆ ನೀಡಿದ್ದಾರೆ.

ಅಡುಗೆ ಅನಿಲ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ವಿದ್ಯುತ್ ಉಪಕರಣಗಳಿಗೆ ಸಬ್ಸಿಡಿ ನೀಡಬಹುದು. ಇದರಿಂದ ಅನಿಲದ ಮೇಲಿನ ಆಮದು ಅವಲಂಬನೆ ಕಡಿಮೆ ಮಾಡಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.

ಮಹಿಳಾ ಸಚಿವೆಗೆ ಐಟಮ್ ಎಂದ ಮಾಜಿ ಸಿಎಂ!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…