ಬೆಂಗಳೂರು: ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಹೊಸಕೋಟೆ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಅವರನ್ನು ಸೋಲಿಸುವ ಮೂಲಕ ಶರತ್ ಬಚ್ಚೇಗೌಡ ಗೆಲುವಿನ ನಗೆ ಬೀರಿದ್ದರು. ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ಶರತ್ ಅವರಿಗೆ ಎಂಟಿಬಿ ಅವರಿಂದ ಟಿಕೇಟ್ ಕೈತಪ್ಪಿದ್ದರಿಂದ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಶರತ್ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದೆ ಎನ್ನುವ ಮಾತು ಚುನಾವಣಾ ಸಂದರ್ಭದಿಂದಲೂ ಕೇಳಿ ಬಂದಿತ್ತು.

ಆದರೆ ಈಗ ಕಾಂಗ್ರೆಸ್ ವರಿಷ್ಠರ ಭೇಟಿಯ ಬಳಿಕ, ಅಂತಿಮ ನಿರ್ಧಾರ ಈಗ ಹೊರ ಬಿದ್ದಿದ್ದು, ಫೆಬ್ರವರಿ 25ರಂದು ಕೆಪಿಸಿಸಿ ಕಚೇರಿಯಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷತ ಇತರೆ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 5324 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5324 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465 ಕ್ಕೆ ಏರಿಕೆಯಾದಂತಾಗಿದೆ.

ಖಾಸಗಿ ವೈದ್ಯರು ವೃತ್ತಿ ಪರತೆ ಮರೆತರೆ ಶಿಕ್ಷೆ ಕಟ್ಟಿಟ್ಟ ಬುತ್ತಿ!

ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

23 ರಂದು ಉಚಿತ ಆರೋಗ್ಯ, ರಕ್ತದಾನ ಶಿಬಿರ

ಉತ್ತರಪ್ರಭ ಸುದ್ದಿನಿಡಗುಂದಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ…