ಮೈಸೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಜನರು ದೇಣಿಗೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ‌ ಅವರು ರಾಮಮಂದಿರ ನಿರಗಮಾಣಕ್ಕೆ ಸಾರ್ವಜನಿಕರು ಹಣ ನೀಡುವ ಸಂಬಂಧ ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ. ನಾನು ದುಡ್ಡು ಕೊಡಲಿ ಬಿಡಲಿ ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ. ಕೇಳುವುದು ನಮ್ಮ ಹಕ್ಕು. ಲೆಕ್ಕೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗವಾಗುತ್ತಿದೆ.ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನು ಅವರೇ ಹೇಳಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವಿಚಾರವಾಗಿ ಪ್ರತಿಕ್ರಿಸಿದ ಸಿದ್ದರಾಮಯ್ಯ, ಕೊರೊನಾ ವಿಚಾರದಲ್ಲೂ ಭ್ರಷ್ಟಾಚಾರ ಮಾಡಲು ಕಾಯುತ್ತಿರುವಂತಿದೆ. ಭ್ರಷ್ಟಾಚಾರವೇ ಇವರ ಕೆಲಸ. ಎಲ್ಲಿ ಕೆಲಸ ಇದೆಯೋ ಅಲ್ಲಿ ದುಡ್ಡು ಹೊಡೆಯುತ್ತಾರೆ. ಕೊರೊನಾ ಮೊದಲ ಅಲೆಯಲ್ಲೂ ಭ್ರಷ್ಟಾಚಾರ ಮಾಡಿದ್ದರು. ಇದನ್ನು ನಾನು ವಿಧಾನಸಭೆಯಲ್ಲೇ ಹೇಳಿದ್ದೇನೆ. ಈಗಲೂ ಅದೇ ನಡೆಯುತ್ತದೆ. ಈ ಸರ್ಕಾರ ಯಾವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಎರಡನೇ ಅಲೆ ಗಂಭೀರವಾಗಿ ಪರಿಗಣಿಸಬೇಕು. ಕೇರಳ ಇರಲಿ, ಆಫ್ರಿಕಾದಿಂದಲೇ ಬರಲಿ ಅಗತ್ಯ ಮುಂಜಾಗ್ರತೆ ವಹಿಸಿ ಎಂದು ಸಲಹೆ ನೀಡಿದರು.

ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮ ಮಂದಿರ ಕಟ್ಟುತ್ತಾರೆ. ಅದರಲ್ಲೇನಿದೆ?ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ. ಇದನ್ನು ಅವರು ರಾಜಕಾರಣಕ್ಕೆ ಬಳಸುತ್ತಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್ ಮೇಲೆ ಯಾವ ನಿರೀಕ್ಷೆಯೂ ಇಲ್ಲ. ಕಾರಣ ಇವರ ಬಳಿ ಹಣವೇ ಇಲ್ಲ ಎಂದು ಕುಟುಕಿದ ಮಾಜಿ ಸಿಎಂ ಸಿದ್ದರಾಮಯ್ಯ ,ನಾನು ಕೇಳಿದ ಪ್ರಶ್ನೆಗಳಿಗೆ ಸಿಎಂ ಯಡಿಯೂರಪ್ಪ ಇನ್ನು ಉತ್ತರ ಕೊಟ್ಟಿಲ್ಲ. ಇನ್ನು ಬಜೆಟ್‌ನಲ್ಲಿ ಏನು ಉತ್ತರ ಕೊಡುತ್ತಾರೆ. ಪ್ರಶ್ನೆ ಕೇಳಿದರೆ ಬರೆದುಕೊಂಡು ಬಂದು ಉತ್ತರ ಕೊಡುತ್ತಾರೆ. ಇವರಿಂದ ಯಾವುದೇ ನಿರೀಕ್ಷೆ ಇಲ್ಲ ಎಂದು ಟಿಕಿಸಿದರು.

ಜೊತೆಗೆ ಸಚಿವ ಉಮೇಶ್ ಕತ್ತಿ ಅವರ ಬಿಪಿಎಲ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇದು ಕತ್ತಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದರು.

Leave a Reply

Your email address will not be published. Required fields are marked *

You May Also Like

ಬೈಕ್ ಗೆ ಲಾರಿ ಡಿಕ್ಕಿ: ಎಸ್.ಎಸ್.ಎಲ್.ಸಿ 3 ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಮುಂಡರಗಿ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ‌ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು…

ಫೆ.24ರಿಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಫೆ.24 ರಿಂದ 26 ವರೆಗೆ ಗವಿಮಠದ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ಪಾದಯಾತ್ರೆ ಕೈಗೊಂಡ ಅಪ್ಪು ಅಭಿಮಾನಿಗೆ ಸನ್ಮಾನ

ವರದಿ : ವಿಠಲ‌ ಕೆಳೂತ್ ಮಸ್ಕಿ: ಬೆಂಗಳೂರುನಲ್ಲಿನ ಪುನೀತ ರಾಜಕುಮಾರ ಸಮಾಧಿವರೆಗೆ ಪಾದಯಾತ್ರೆ ನಡೆಸಿರುವ ಅಪ್ಪು…