ಬೆಳಗಾವಿ: ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯು ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಇನ್ನಿತರೆ ರಾಜ್ಯಗಳಲ್ಲಿ ತೀವ್ರತರವಾಗಿ ಹರಡುತ್ತಿರುವುದರಿಂದೆ. ಈ ಕಾರಣದಿಂದ ಮಹಾರಾಷ್ಟ್ರ ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಯ ಹಲವಾರು ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ, ಮಹಾರಾಷ್ಟ್ರ ರಾಜ್ಯದಿಂದ ಆತ್ಯಂತ ಗಣನೀಯ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಭಕ್ತಾಧಿಗಳು ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಾರೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ರೂಪಾಂತರಿ ವೈರಾಣುವಿನ ಹರಡುವಿಕೆಯನ್ನು ಸಾರ್ವಜನಿಕರ ಹಾಗೂ ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ನಿಯಂತ್ರಿಸುವುದು ಅತ್ಯಂತ ಅವಶ್ಯವಾಗಿರುತ್ತದೆ.
ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ನೀಡಿದೆ.
ದೇವಸ್ಥಾನಗಳ ಆಡಳಿತ ಮಂಡಳಿಯವರು ಈ ದೇವಸ್ಥಾನಗಳಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲ ಮುಂಜಾಗ್ರತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಲಾಗಿದೆ.
ಯಾವ ದೇವಸ್ಥಾನಗಳಿಗೆ ದರ್ಶನ ನಿಷೇಧ
ಬೆಳಗಾವಿ ಜಿಲ್ಲೆಯಲ್ಲಿರುವ ಸವದತ್ತಿ ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಹಾಗೂ ಶ್ರೀ ಜೋಗಳಭಾವಿ ಸತ್ಯಮ್ಮ ದೇವಿಯ ದೇವಸ್ಥಾನ ಮತ್ತು ರಾಯಭಾಗ ತಾಲೂಕಿನ ಶ್ರೀ ಚಂಚಲಿ ಮಾಯಕ್ಕಾ ದೇವಿಯ ದೇವಸ್ಥಾನಕ್ಕೆ ಮಹಾರಾಷ್ಟ್ರ ಮತ್ತು ಇತರೆ ರಾಜ್ಯ ಹಾಗೂ ಇತರ ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಭಕ್ತಾಧಿಗಳು ಆಗಮಿಸುವ ಸಂಭವ ಹೆಚ್ಚಾಗಿರುತ್ತದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ಸಾರ ಕ್ರಮ ಜರುಗಿಸಲಾಗುವುದು.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 (ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯನ್ನು ತಡೆಯುವ ಕುರಿತು ಮುಂಜಾಗೃತಾ ಕ್ರಮವಾಗಿ ದೇವಸ್ಥಾನಗಳಿಗೆ ಸಾರ್ವಜನಿಕ ಭಕ್ತಾಧಿಗಳ ದರ್ಶನವನ್ನು ಮುಂದಿನ ಆದೇಶದವರಗೆ ನಿರ್ಭಂಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.