ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು, ಇದೀಗ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಈ ನಿರ್ಧಾರವನ್ನು ಅಂತಿಮಗೊಳಿಸಲು ಮುಂದಿನ ವಾರ ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಭೆ ನಡೆಸಲಿದ್ದು, ಸಭೆಯಲ್ಲಿ ಆರೋಗ್ಯ ತಜ್ಞರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.

12 ಗಂಟೆಗಳ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ವಿಜಯ್ ವಾಡೆಟ್ಟಿವಾರ್ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ವಾರ ನಡೆಯಲಿರುವ ಸಭೆಯಲ್ಲಿ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

263 ಕೋಟಿ ರೂ. ಸೇತುವೆ: 29 ದಿನಕ್ಕೇ ಕುಸಿದು ನದಿಗೆ ಬಿತ್ತು!

263 ಕೋಟಿ ರೂ. ವೆಚ್ಚದಲ್ಲಿ ನದಿ ಮೇಲೆ ನಿರ್ಮಿಸಿದ್ದ ಈ ಸೇತುವೆ ಜೂನ್ 16ರಂದು ಉದ್ಘಾಟನೆಯಾಗಿತ್ತು. ಬುಧವಾರ ಧಡಾರನೆ ಕುಸಿದು ನದಿಯೊಳಕ್ಕೆ ಬಿದ್ದಿದೆ!

ಹರ್ನಾಜ್ ಕೌರ್ ಸಂಧು 2021ರ ನೂತನ ವಿಶ್ವ ಸುಂದರಿ!

ಉತ್ತರಪ್ರಭ ದೆಹಲಿ: 2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು…

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಕೊರೊನಾದಿಂದ ನಲುಗಿದ ರಾಜ್ಯಗಳ ಈಗಿನ ಸಾಧನೆ ಏನು?

ನವದೆಹಲಿ : ದೇಶದಲ್ಲಿ ಕೊರೊನಾ ಅಟ್ಟಹಾಸ ಪ್ರಾರಂಭವಾದ ಸಂದರ್ಭದಲ್ಲಿ ಹಲವು ರಾಜ್ಯಗಳ ಅದರ ಹೊಡೆತಕ್ಕೆ ಸಿಲುಕಿ ನಲುಗಿದ್ದವು. ಆದರೆ, ಇಂದು ಅಂತಹ ರಾಜ್ಯಗಳಲ್ಲಿ ಕೂಡ ಚೇತರಿಕೆ ಕಂಡು ಬರುತ್ತಿದೆ.