ಗಾನ ಮೂವ್ಹೀಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಮಮತಾ ಲೋಹಿತ್ ನಿರ್ಮಿಸುತ್ತಿರುವ ಹಿಟ್ಲರ್ ಕನ್ನಡ ಚಲನಚಿತ್ರದ ಟೀಸರ್ 1.1 ಮಿಲಿಯನ್ ವೀಕ್ಷಣೆ ಕಂಡು ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಚಿತ್ರ ತಂಡ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಕಳೆದ ವಾರವಷ್ಟೇ ಗಾಲಿ ಜನಾರ್ಧನರೆಡ್ಡಿ ಅವರು ಟೀಸರ್ ಬಿಡುಗಡೆ ಮಾಡಿದ್ದರು. ಈಗ ಅದು ಒಂದೇ ವಾರದಲ್ಲಿ 1.1 ಮಿಲಿಯನ್ ವೀಕ್ಷಕರು ವೀಕ್ಷಣೆ ಮಾಡುವ ಮೂಲಕ ನಮ್ಮ ಚಿತ್ರ ತಂಡಕ್ಕೆ ಎಲ್ಲಿಲ್ಲದ ಉತ್ಸಾಹ ತುಂಬಿದ್ದಾರೆ ಎಂದು ಚಿತ್ರದ ನಿರ್ದೇಶಕ ಕಿನ್ನಾಳರಾಜು ತಿಳಿಸಿದ್ದಾರೆ. ವಿಶೇಷವಾಗಿ ಈ ಟೀಸರ್ ಗೆ ಕೆ ಜಿ ಎಫ್ ಖ್ಯಾತಿಯ ಗರುಡ ರಾಮ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಸಮಾರಂಭದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಮತ್ತು ಗರುಡ ರಾಮ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರ ಏಪ್ರಿಲ್ ೯ ರ ಯುಗಾದಿ ಹಬ್ಬದ ಕೊಡುಗೆಯಾಗಿ ಬಿಡುಗಡೆ ಆಗಲಿದೆ ಎಂದು ಚಿತ್ರ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದರು.

            ಚಿತ್ರದಲ್ಲಿ ನಾಯಕನಾಗಿ ಲೋಹಿತ್, ನಾಯಕಿಯಾಗಿ ಸಸ್ಯ, ಬಲ ರಾಜವಾಡಿ, ವೈಭವ, ನಾಗರಾಜ್, ವಿಜಯ ಚಂಡೂರ್, ವರ್ಧನ್, ವೇದಾ ಹಾಸನ, ಶಶಿಕುಮಾರ ಮೊದಲಾದವರು ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಕನ್ನಡ ಕೋಗಿಲೆ ಖ್ಯಾತಿ ಅರ್ಜುನ್ ಇಟಗಿ ಮೊದಲಬಾರಿಗೆ ತೆರೆಗೆ ಬರುತ್ತಿದ್ದಾರೆ.

          ಛಾಯಾಗ್ರಹಣ ಜಿ.ವಿ.ನಾಗರಾಜ್ ಕಿನ್ನಾಳ, ಸಂಕಲನ ಗಣೇಶ್ ತೋರಗಲ್, ಸಾಹಸ ಚಂದ್ರು ಬಂಡೆ, ನೃತ್ಯ ಅರುಣ್ ರೈ, ಪಿಆರ್‌ಓ ಆರ್.ಚಂದ್ರಶೇಖರ, ಪ್ರಚಾರಕಲೆ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಕಥೆ-ಚಿತ್ರಕಥೆ-ಸಂಭಾಷಣೆ ಜೊತೆಗೆ ನಿರ್ದೇಶನವನ್ನು ಕಿನ್ನಾಳರಾಜು ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರು ಪರ್ವೇಶ್ ಸಿಂಗ್, ಮಮತಾ ಲೋಹಿತ್ ನಿರ್ಮಾಪಕರಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆ ವಿವರ

ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿನ ಒಟ್ಟು 6004 ಗ್ರಾಮ ಪಂಚಾಯತಿಗಳಲ್ಲಿ ಅವಧಿ ಮುಕ್ತಾಯವಾಗದ 162 ಗ್ರಾಮ ಪಂಚಾಯತಿಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ 6 ಗ್ರಾಮ ಪಂಚಾಯತಿಗಳು ಮತ್ತು 33 ಗ್ರಾಮ ಪಂಚಾಯತಿಗಳು ಪೂರ್ಣವಾಗಿ ಹಾಗೂ 41 ಗ್ರಾಮ ಪಂಚಾಯತಿಗಳು ಬಹುಶಃ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವುದರಿಂದ ಒಟ್ಟು 74 ಗ್ರಾಮ ಪಂಚಾಯತಿಗಳು ಒಟ್ಟಾರೆ 242 ಗ್ರಾಮ ಪಂಚಾಯತಿಗಳನ್ನು ಹೊರತು ಪಡೆಸಿ ಉಳಿದ ಎಲ್ಲ 5762 ಗ್ರಾಮ ಪಂಚಾಯತಿಗಳ 35,884 ಕ್ಷೇತ್ರಗಳಿಂದ ಒಟ್ಟು 92121 ಸ್ಥಾನಗಳಿಗೆ ಈ ಕೆಳಕಂಡ ವೇಳಾ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು.

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…