ಬೆಂಗಳೂರು: ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.

ಈ ಚಿತ್ರದಲ್ಲಿ ಅರ್ಚಕರು ಹಾಗೂ ಪುರೋಹಿತರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಖಂಡನೀಯವಾದದ್ದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ.

ಯಾವುದೇ ಜಾತಿ ಧರ್ಮವನ್ನು ಅವಹೇಳನಕಾರಿಯಾಗಿ ತೋರಿಸುವುದು ಸರಿಯಾದ ಕ್ರಮವಲ್ಲ. ಅದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಿದಂತಾಗುತ್ತದೆ. ತಕ್ಷಣವೇ ಈ ದೃಶ್ಯವನ್ನು ತೆಗೆದುಹಾಕುವಂತೆ ಆಗ್ರಹಿಸಿದ್ದಾರೆ.

ಪೊಗರು ಚಿತ್ರದ ನಿರ್ಮಾಪಕರು, ನಿರ್ದೇಶಕರು ಕ್ಷಮೆ ಕೋರಬೇಕು, ಇಲ್ಲದಿದ್ದರೆ ಮಂಗಳವಾರ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಹಾಗೂ ತದನಂತರ ಇಡೀ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಭೀಕರ ಅಪಘಾತ, ಕಾರ ಬ್ಲಾಸ್ಟ್ : 3 ಜನರ ಸಾವು

ಉತ್ತರಪ್ರಭರೋಣ: ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ…

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.