ಪೆಟ್ರೋಲ್-ಡಿಸೇಲ್ ದರ ಇಳಿಕೆಗೆ ಕೇಂದ್ರ ಸಚಿವೆ ನೀಡಿದ ಸಲಹೆ ಏನು?

ನವದೆಹಲಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿಚಾರ ಇದೊಂದು ದುಃಖಕರ ಸಂಗತಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಲಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬೆಲೆ ಏರಿಕೆಯ ಬೇಸರದ ಸಂಗತಿಗೆ ಬೆಲೆ ಇಳಿಕೆ ಮಾಡುವುದೇ ಇದಕ್ಕೆ ಪರಿಹಾರವಾಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ಟಿ ವ್ಯಾಪ್ತಿಗೆ ತಂದರೆ ಒಂದೇ ತೆರಿಗೆ ದರ ಅನ್ವಯವಾಗುತ್ತದೆ. ಇದರಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಆಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಜಿಎಸ್ಟಿ ಮಂಡಳಿ ಸಮಾಲೋಚನೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.

ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಿಸುತ್ತವೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಪೆಟ್ರೋಲ್, ಡೀಸೆಲ್ ಅಡುಗೆ ಅನಿಲವನ್ನು ಗ್ರಾಹಕರಿಗೆ ಯೋಗ್ಯ ಬೆಲೆಯಲ್ಲಿ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮಕೈಗೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂಧನ ಬೆಲೆಯಿಂದ ಜನಸಾಮಾನ್ಯರು ಪರಿತಪಿಸುವಂತಾಗಿದ್ದು ಈ ಮದ್ಯೆ ಸಚಿವೆ ನಿರ್ಮಲಾ ಸೀರಾರಾಮನ್ ಹೇಳಿಕೆಗೆ ಹೆಚ್ಚು ಮಹತ್ವ ಬಂದಿದೆ.

Exit mobile version