ಬೆಂಗಳೂರು: ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕಟಣೆ ನೀಡಿ, ಆಯೋಗವು 2019ನೇ ಸಾಲಿನ ರಾಜ್ಯ ಮಟ್ಟದ ವಿವಿಧ ಇಲಾಖೆಗಳಲ್ಲಿ ಮತ್ತು ಕರ್ನಾಟಕ ಭವನ ದೆಹಲಿಯ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಸಹಾಯಕ, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಜನೇವರಿ 24 ರಂದು ನಡೆಸಲು ಉದ್ದೇಶಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರಕಟಿಸಲಾದ ಪ್ರವೇಶ ಪತ್ರಗಳನ್ನು ರದ್ದುಪಡಿಸಲಾಗಿದೆ. ಪ್ರವೇಶ ಪರೀಕ್ಷೆಯ ಪರಿಷ್ಕೃತ ಪ್ರವೇಶ ಪತ್ರ ಡೌನ್ ಲೋಡ್ ಬಗ್ಗೆ ಕೆಪಿಎಸ್ಸಿಯಿಂದ ಅವಕಾಶ ನೀಡಿದೆ.

ಪ್ರಸ್ತುತ ಸದರಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮರು ನಿಗದಿಯಾದ ದಿನಾಂಕ 28-02-2021ರ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಲು ಆಯೋಗವು ತೀರ್ಮಾನಿಸಿರುತ್ತದೆ. ಅದರಂತೆ ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ https://kpsc.kar.nic.in ನಲ್ಲಿ ಸಹಾಯಕ, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ದಿನಾಂಕ 28-02-2021ಕ್ಕೆ ಪರಿಷ್ಕೃತ ಪ್ರವೇಶ ಪತ್ರಗಳು ಎಂಬ ಶೀರ್ಷಿಕೆಯಡಿಯಲ್ಲಿ ತಮ್ಮ ಯೂಸರ್ ನೇಮ್ ಮತ್ತು ಪಾಸ್ ವರ್ಡ್ ಉಪಯೋಗಿಸಿ, ಪರಿಷ್ಕೃತ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ದಿನಾಂಕ 21-02-2021ರಿಂದ ಅವಕಾಶ ಕಲ್ಪಿಸಲಾಗಿದೆ.

ದಿನಾಂಕ 24-01-2021ರ ಪ್ರವೇಶ ಪತ್ರವನ್ನು ಸದರಿ ಸ್ಪರ್ಧಾತ್ಮಕ ಪರೀಕ್ಷೆಗೆ ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳು ಪರಿಷ್ಕೃತ ಪ್ರವೇಶ ಪತ್ರವನ್ನು ಹಾಜರುಪಡಿಸದಿದ್ದಲ್ಲಿ ಮತ್ತು ದಿನಾಂಕ 24-01-2021ರ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಹಾಜರುಪಡಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ಕಡ್ಡಾಯವಾಗಿ ದಿನಾಂಕ ಫೆ.28ರ ಸ್ಪರ್ಧಾತ್ಮಕ ಪರೀಕ್ಷೆಗೆ ಜಾರಿಗೊಳಿಸಲಾದ ಪರಿಷ್ಕೃತ ಪ್ರವೇಶ ಪತ್ರಗಳೊಂದಿಗೆ ಮಾತ್ರ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಮುಷ್ಕರ: ಕೋಡಿಹಳ್ಳಿ ಅವರಿಗೆ 10 ಲಕ್ಷ ಪರಿಹಾರ ಕೇಳಿದ ವಿದ್ಯಾರ್ಥಿನಿ

ಬೇಡಿಕೆ ಇಡೆರಿಕೆಗೆ ಒತ್ತಾಯಿಸಿ ಏ.7 ರಿಂದಲೇ ರಾಜ್ಯವ್ಯಾಪಿ ಎಲ್ಲ ನಿಗಮಗಳಲ್ಲಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಹಿನ್ನೆಲೆ ಸರ್ಕಾರಿ ಬಸ್ ಗಳು ರಸ್ತೆಗೆ ಇಳಿಯುತ್ತಿಲ್ಲ. ಸಾರಿಗೆ ನೌಕರರ ಮುಷ್ಕರ ಕಾರಣದಿಂದ ಖಾಸಗಿ ವಾಹನಗಳಿಗೆ ಪ್ರಯಾಣಿಕರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಶ್ರೀ ವೀರೆಶ್ವರ ಪೂಣ್ಯಾಶ್ರಮ ಅಂದಮಕ್ಕಳ ಶಾಲೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ

ಶ್ರೀ ವೀರೆಶ್ವರ ಪೂಣ್ಯಾಶ್ರಮ ಅಂದಮಕ್ಕಳ ಶಾಲೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಶಸ್ತಿ

ಕೊರೊನಾದಿಂದಾಗಿ ಸಪ್ತಪದಿ ಸಮಯ ಬದಲಿಸಿದ ಸರ್ಕಾರ!

ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.

ಮಸ್ಕಿಗೆ ಮೂಲಭೂತ ಸೌಕರ್ಯ ಮರೀಚಿಕೆ..!

ಜಿಲ್ಲೆಯ ಮಸ್ಕಿ ಪಟ್ಟಣ ತಾಲೂಕು ಕೇಂದ್ರವಾಗಿ ಎರಡು ವರ್ಷ ಉರುಳುತ್ತಿದ್ದರು. ಇಲ್ಲಿನ ಮೂಲಭೂತ ಸೌಕರ್ಯಗಳು ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ…