ಬೆಂಗಳೂರು: ಇದು ಬೇಕಂತ ಒಂದು ಜನಾಂಗಕ್ಕೆ ಧಕ್ಕೆ ತರಲು ಮಾಡಿಲ್ಲ, ಇದೊಂದು ಕಾಲ್ಪನಿಕವಾದ ಕಥೆ, ತಿಳಿದೋ ತಿಳಿಯದೆಯೋ ಈ ರೀತಿ ಆಗಿದೆ, ನಿಮಗೆ ನೋವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದು ಕೈಮುಗಿದಿದ್ದಾರೆ ನಿರ್ದೇಶಕ ನಂದ ಕಿಶೋರ್.

ಇತ್ತೀಚೆಗಷ್ಟೆ ಬಿಡುಗಡೆ ಆದ ಧ್ರುವ ಸರ್ಜಾ-ರಶ್ಮಿಕಾ ಮಂದಣ್ಣ ನಟನೆಯ ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆರೋಪಿಸಿತ್ತು.

ಬ್ರಾಹ್ಮಣ ಸಮುದಾಯಕ್ಕೆ ಅವಹೇಳನ ಮಾಡಿರುವ ದೃಶ್ಯಗಳನ್ನು ಸಿನಿಮಾದಿಂದ ತೆಗೆದು ಹಾಕಬೇಕು ಜೊತೆಗೆ ಚಿತ್ರತಂಡವು ಬ್ರಾಹ್ಮಣ ಸಮುದಾಯದ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಚ್ಚರಿಕೆ ನೀಡಿದ್ದರು.

ಎಚ್ಚರಿಕೆಗೆ ಮಣಿದಿರುವ ಪೊಗರು ಸಿನಿಮಾ ನಿರ್ದೇಶಕ ನಂದ ಕಿಶೋರ್ ಈ ರೀತಿ ಪ್ರತಿಕ್ರಿಯಿಸಿದರು.

ನೀವುಗಳು ದೊಡ್ಡ ಮನಸ್ಸು ಮಾಡಿ ವಿವಾದವನ್ನು ಇಲ್ಲಿಗೇ ನಿಲ್ಲಿಸಿ ಎಂದು ಮನವಿ ಮಾಡಿಕೊಂಡ ನಂದ ಕಿಶೋರ್, ಮೂರು ವರ್ಷಗಳ ಕಾಲ ಕಷ್ಟಪಟ್ಟು ಸಿನಿಮಾ ಮಾಡಲಾಗಿದೆ. ಕೋವಿಡ್ ನಂತರ ಬಿಡುಗಡೆ ಆಗುತ್ತಿರುವ ಮೊದಲ ಬಿಗ್ ಬಜೆಟ್ ಕನ್ನಡ ಸಿನಿಮಾ, ಯಾವುದೇ ದುರುದ್ದೇಶ ಇಲ್ಲದೆ ಸಿನಿಮಾ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ಡೋಣಿಯಲ್ಲಿ ತೆಂಗಿನಮರಕ್ಕೆ ಬೆಂಕಿ

ಮುಂಡರಗಿ: ತಾಲೂಕುನ ಡೋಣಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಟೆಂಗಿನಮರ ಸುಟ್ಟಿದೆ.

ಸಮಾಜ ಸಂಘಟನೆಗೆ ಕೈ ಜೋಡಿಸಿ: ಬಸವರಾಜ

ಉತ್ತರಪ್ರಭ ಸುದ್ದಿಶಿರಹಟ್ಟಿ: ರಾಜ್ಯ ವೀರಶೈವ ಲಿಂಗಾಯಿತ ಪಂಚಮಸಾಲಿ ಸಂಘ ತಾಲೂಕು ಘಟಕ ಆಶ್ರಯದಲ್ಲಿ ತಾಲೂಕಿನ ಕಡಕೋಳ…

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…