ಬೆಂಗಳೂರು : ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಹೆಸರು ಕೈಬಿಟ್ಟು ನಗರದ ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಅಂಗ ಸಂಸ್ಥೆ ಆಶಾ ದೀಪ್ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಎಸ್.ಆರ್. ಹಿರೇಮಠ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೋಮಶೇಖರ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು ಅರ್ಜಿ ವಜಾಗೊಳಿಸಿದೆ.

ಕರ್ನಾಟಕ-ಆಂಧ್ರ ಗಡಿ ಸರ್ವೇ ಕಂಪ್ಲೀಟ್: ಮತ್ತೆ ಜೈಲಿಗೆ ಹೋಗ್ತಾರಾ ಜನಾರ್ದನ ರೆಡ್ಡಿ?

ಲಕ್ಷ್ಮೀ ಅರುಣಾ ಅವರು ಮೆಸ​ರ್ಸ್ ಅಸೋಸಿಯೇಟೆಡ್ ಮೈನಿಂಗ್ ಕಂಪನಿಯ ದಾಖಲೆಗೆ ಸಹಿ ಹಾಕಿದ್ದಾರೆ. ಪತಿ ಗಾಲಿ ಜನಾರ್ದನ ರೆಡ್ಡಿ ಹೇಳಿದ ದಾಖಲೆಗೆ ಸಹಿ ಹಾಕಿದ್ದಾರೆ. ಅದಕ್ಕಾಗಿ ಅಕ್ರಮ ಗಣಿಗಾರಿಕೆಯಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ, ಪ್ರಕರಣದಿಂದ ಲಕ್ಷ್ಮೀ ಅರುಣಾ ಹೆಸರು ಕೈಬಿಟ್ಟ ಸಿಬಿಐ ನ್ಯಾಯಾಲಯದ ಆದೇಶ ಸರಿಯಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ತನಿಖಾಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿ ಹಾಗೂ ಅವರ ಪತ್ನಿ ಲಕ್ಷ್ಮೀ ಅರುಣಾ ಎರಡನೇ ಆರೋಪಿಯಾಗಿದ್ದರು. ಇದರಿಂದ ಲಕ್ಷ್ಮೀ ಅರುಣಾ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

You May Also Like

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…

ಹಣ ಪಡೆಯುವ ವೇಳೆ ಜೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ

ಜೆಸ್ಕಾಂ ಇಲಾಖೆಯ ಎಇಇ ಅಧಿಕಾರಿ ಭಾಸ್ಕರ್ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ.

ಟಿಕ್ ಟಾಕ್ ಬ್ಯಾನ್ ಗೆ ಆಗ್ರಹಿಸಿ ಮುಂಡರಗಿಯಲ್ಲಿ ಪ್ರತಿಭಟನೆ

ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನ.30ಕ್ಕೆ ಗಾಣಿಗ ಸಮುದಾಯ ಭವನದ ಲೋಕಾರ್ಪಣೆ

ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾನಿಗ ಸಮಾಜದ ಸಮುದಾಯ ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.