ಶಿವಮೊಗ್ಗ: ಜಿಲ್ಲೆಯ ಹುಣಸೋಡು ಅಕ್ರಮ ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೆಟಿನ್‌ ಸ್ಪೋಟಗೊಂಡ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ.

ಹಿರೇನಾಗವಳ್ಳಿ ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುಮಾರು 12ಕ್ಕೆ ಬ್ರಹ್ಮರವರ್ಷಿಣಿ ಕಲ್ಲುಕ್ವಾರಿ ಕ್ರಷರ್​ನಿಂದ  1.5 ಕಿ.ಮೀ. ದೂರದ ಕಾಡಿನಲ್ಲಿ ಈ ಜಿಲೆಟಿನ್ ಸ್ಫೋಟ ಸಂಭವಿಸಿದೆ. ಭಾರೀ ಸ್ಪೋಟ ಸಂಭವಿಸಿ 5 ಜನ ಸ್ಥಳದಲಿಯೇ ಸಾವನ್ನಪಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂವರು ಸ್ಥಿತಿ ಗಂಭೀರಾವಾಗಿದೆ.

ಜಿಲೆಟಿನ್ ಸ್ಫೋಟದ ತೀವ್ರತೆ ಹೆಚ್ಚಿದ್ದರಿಂದ ಹತ್ತಾರು ಕಿಲೋಮೀಟರ್ ದೂರದವರೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಜನ ಭೂಕಂಪ ಎಂದು ಭಾವಿಸಿ ಮಧ್ಯರಾತ್ರಿ ಮನೆಯಿಂದ ಹೊರಗೆ ಓಡಿ ಬಂದಿದ್ದರು. ನಂತರ ಇದು ಜಿಲೆಟಿನ್‌ ಸ್ಫೋಟಗೊಂಡಿದ್ದು ಎಂದು ತಿಳಿದುಬಂದಿದೆ. ಸ್ಥಳೀಯರು ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲೆಟಿನ್‌ ಸ್ಪೋಟದಿಂದ ತೊಂದರೆಯಾಗುತ್ತಿರುವ ಬಗ್ಗೆ 2008 ರಿಂದಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತಿತ್ತು ಎಂದು ಗ್ರಾಮಸ್ಥರು ಹೇಳಿದ್ದಾರೆ.

ಬ್ರಹ್ಮರವರ್ಷಿಣಿ ಕಲ್ಲುಕ್ವಾರಿಯಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ಹಿಂದೆ ಅಧಿಕಾರಿಗಳು ದಾಳಿ ನಡೆಸಿದ್ದರು. ಕಂಪ್ರೆಸರ್ ಜಪ್ತಿಗೆ ಫೆ.22 ರಂದು ಪೊಲೀಸರು ತೆರಳಿದ್ದರು, ಪೊಲೀಸರ ಕಣ್ಣುತಪ್ಪಿಸಲು ಜಿಲೆಟಿನ್ ಕಡ್ಡಿಯನ್ನು ಬಚ್ಚಿಡಲಾಗಿತ್ತು. ಮುಚ್ಚಿಟ್ಟ ಜಿಲೆಟಿನ್ ಸಾಗಿಸಲು ಬಂದ ವೇಳೆಯಲ್ಲಿ ಸ್ಪೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ವಾರಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಬಳ್ಳಾಪುರ ಎಸ್.ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಎರಡಂಕಿ ಬಿಡದ ಸೋಂಕು: 14 ಕೊರೊನಾ ಪಾಸಿಟಿವ್! ಗದಗ: ಜಿಲ್ಲೆಯಲ್ಲಿಂದು 14…

ನಗರದಲ್ಲಿ ಮತ್ತೆ ಹಲವು ಪ್ರದೇಶಗಳು ಸೀಲ್ ಡೌನ್ ಪಟ್ಟಿಗೆ!

ಬೆಂಗಳೂರು : ನಗರದಲ್ಲಿ ಮಹಾಮಾರಿಯ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೀಲ್ ಡೌನ್ ಹೆಚ್ಚಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ನಗರದ ಬಹುತೇಕ ಏರಿಯಾಗಳು ಸೀಲ್ಡೌಗನ್ ಆಗಲಿವೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ

ರಾಜ್ಯದಲ್ಲಿ ಇನ್ನೆಷ್ಟು ದಿನ ಲಾಕ್ ಡೌನ್?

ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಇಂದು ಕೂಡ ನಾಲ್ಕು ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಇಂದು 4,439 ಜನರು ಸೋಂಕಿಗೆ ಒಳಗಾಗಿದ್ದಾರೆ. ಅಲ್ಲದೇ, ಇಂದು ಆಸ್ಪತ್ರೆಯಿಂದ 10,106 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಇಂದು 32 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.