ಗದಗ: ಜಿಲ್ಲೆಯಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನವನ್ನು ರಾಜ್ಯದಲ್ಲಿಯೇ ಮಾದರಿ ಭವನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶರಣು ಗೋಗೇರಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಡರಗಿ ತಾಲೂಕಾ ಕನ್ನಡ ಸಾಹಿತ್ಯ ಭವನಕ್ಕೆ ನಿರ್ಮಾಣಕ್ಕೆ ಶ್ರೀ ನಾಡೋಜ ಡಾ.ಅನ್ನದಾನೀಶ್ವರ ಶ್ರೀಗಳು 6 ಗುಂಟೆ ಜಮೀನನ್ನು ದಾನವಾಗಿ ನೀಡಿದ್ದು, ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಅಭಿನಂದಿಸುತ್ತೇವೆ ಎಂದು ತಿಳಿಸಿದರು.

ರೋಣ ತಾಲೂಕು ಕನ್ನಡ ಸಾಹಿತ್ಯ ಭವನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ 30 ಲಕ್ಷ ರೂ. ಬಿಡುಗಡೆಯಾಗಿದೆ. ರಾಜ್ಯ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ 5 ಲಕ್ಷ ರೂ. ಹಾಗೂ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರಿಂದ 3 ಲಕ್ಷ ರೂ. ಹಣ ಬಿಡುಗಡೆ ಮಾಡಿಸಲಾಗಿದೆ ಎಂದರು.

ಮುಂಡರಗಿಯಲ್ಲಿ ಕನ್ನಡ ಸಾಹಿತ್ಯ ಭವನಕ್ಕೆ ಕನ್ನಡ ಸಾಹಿತ್ಯ ಪರಿಷತ್ತನಿಂದ 15 ಲಕ್ಷ ರೂ ಹಣ ಬಿಡುಗಡೆ ಮಾಡಿಸಲಾಗಿದ್ದು, ಲಕ್ಷ್ಮೀಶ್ವರನಲ್ಲಿ ಕನ್ನಡ ಸಾಹಿತ್ಯ ಭವನಕ್ಕೆ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತನಿಂದ 15 ಲಕ್ಷ, ನರಗುಂದ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಪರಿಷತ್ತನಿಂದ 15 ಲಕ್ಷ ಬಿಡುಗಡೆ ಮಡಿಸಲಾಗಿದೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಭವನಕ್ಕೆ ಪೀಠೋಪಕರಣ ಖರೀದಿಗಾಗಿ 10 ಲಕ್ಷ ರೂ. ಹಣ ಬಿಡುಗಡೆ ಮಾಡಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 27 ಮತ್ತು 28 ರಂದು ನಡೆಯಲಿರುವ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಪ್ರಾತಿನಿಧಿಕ ಕಥಾಸಂಕಲನ ಕಥಾಲೋಕ ಕಥಾ ಸಂಕಲನ, ಬೆಳ್ವಲ ಕಾವ್ಯಸಿರಿ ಕವನ ಸಂಕಲನ ಬಿಡುಗಡೆಗೊಳ್ಳಲಿದೆ. ಮುಂಡರಗಿಯ ಶ್ರೀ ಅನ್ನದಾನೀಶ್ವರ ಸಂಸ್ಥಾನ ಮಠದ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಶ್ರೀಗಳು ಸಮ್ಮೇಳನದ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸುವರು ಎಂದು ತಿಳಿಸಿದರು.

ಅಂದಾನಪ್ಪ ವಿಭೂತಿ, ಎಂ.ಕೆ ಲಮಾಣಿ, ಪ್ರೇಮನಾಥ ಗರಗ, ವಿ.ಎಂ ಹಿರೇಮಠ, ಎಂ.ಬಿ. ಹಿರೇಮಠ, ಪ್ರಕಾಶ ಮಂಗಳೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ

ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ

ಬೆಳಗಾವಿ: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ…

ಲಕ್ಷ್ಮೇಶ್ವರ: ಜಯ ಕರ್ನಾಟಕ ಜನಪರ ವೇದಿಕೆಯಿಂದ ಮನವಿ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.