ಖ್ಯಾತ ಗಾಲ್ಫ್ ಆಟಗಾರ ಟೈಗರ್ ಸ್ಥಿತಿ ಗಂಭೀರ.!

ಕ್ಯಾಲಿಫೋರ್ನಿಯಾ: ಕಾರು ಅಪಘಾತದಲ್ಲಿ ಪ್ರಖ್ಯಾತ ಗಾಲ್ಫ್ ಆಟಗಾರ ಟೈಗರ್ ವುಡ್ಸ್ (೪೫) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಲಾಸ್ ಏಂಜಲಿಸ್ನ ಕೌಂಟಿ ಶೆರಿಫ್ಸ್ ಇಲಾಖೆ ಮಾಹಿತಿ ನೀಡಿದೆ.

ಕ್ಯಾಲಿಫೋರ್ನಿಯಾದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದ ವೇಳೆ ಕಾರಿನಲ್ಲಿ ವುಡ್ಸ್ ಒಬ್ಬರೆ ಇಬ್ಬರು. ಅವರ ಕಾಲಿಗೆ ಅನೇಕ ಗಾಯಗಳಾಗಿವೆ. ಸದ್ಯ ಕಾಲಿಗೆ ಸರ್ಜರಿ ಮಾಡಲಾಗಿದೆ ಎಂದು ಸ್ಟೈನ್ಬರ್ಗ್ ತಿಳಿಸಿದ್ದಾರೆ.

ವುಡ್ಸ್ ಅವರು ಕಾರು ಅಪಘಾತದಲ್ಲಿ ಸಿಲುಕಿರುವುದು ಇದು ಮೂರನೇ ಬಾರಿ. 2009 ರಲ್ಲಿ ಇದಕ್ಕಿಂತಲೂ ಭೀಕರವಾಗಿ ಅಪಘಾತ ನಡೆದಿತ್ತು. ಅಂದು ಎಸ್ಯುವಿ ಕಾರು ಮರಕ್ಕೆ ಅಪ್ಪಳಿಸಿತ್ತು. ಇದರ ಬೆನ್ನಲ್ಲೇ ವುಡ್ಸ್ ಅನೇಕ ಮಹಿಳೆಯರೊಂದಿಗೆ ಸಂಬಂಧವಿದೆ ಮತ್ತು ತನ್ನ ಹೆಂಡತಿಗೆ ಮೋಸ ಮಾಡುತ್ತಿದ್ದಾನೆ ಎಂಬ ಆಘಾತಕಾರಿ ವಿಷಯು ಬಹಿರಂಗವಾಗಿತ್ತು.

ಫೆ.23 ರ ಬೆಳಗ್ಗೆ 7.12 ರ ಸುಮಾರಿಗೆ ವುಡ್ಸ್ ಕಾರು ಅಪಘಾತಕ್ಕೀಡಾಯಿತು. ಕಾರು ಬ್ಲ್ಯಾಕ್ಹಾರ್ಸ್ ರಸ್ತೆಯಲ್ಲಿರುವ ಹಾಥಾರ್ನ್ ಬೌಲೆವಾರ್ಡ್ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ತಿಳಿಸಿದ್ದಾರೆ.

Exit mobile version