ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. 2019-20 ನೇ ಸಾಲಿನ ಪಾಸ್ ತೋರಿಸಿ ಮಾ.31 ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರ ವಿಧಾನಸೌಧದಲ್ಲಿ ಸಕಾಲ ಮತ್ತು ಸೇವಾ ಸಿಂಧು ಹಾಗೂ ಸಾರಿಗೆ ಸಂಸ್ಥೆ ಅಧಿಕಾರಿಗಳೊದಿಗೆ ಸಭೆ ನಡೆಸಿದ್ದಾರೆ.

ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ಪಡೆಯಲು ಆಗಿರುವ ತೊಂದರೆ ನಿವಾರಿಸಿ ಸಕಾಲದಲ್ಲಿ ಬಸ್ ಪಾಸ್ ವಿತರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಸೇವಾ ಸಿಂಧು ಪೊರ್ಟಲ್ ನಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎನ್ನುವ ದೂರುಗಳು ಬಂದಿವೆ. ಬಸ್ ಪಾಸ್ ಇಲ್ಲದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅರ್ಜಿ ಸಲ್ಲಿಕೆಯನ್ನು ಸರಳಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

ಸಂಘಗಳಲ್ಲಿ ಪಡೆದ ಸಾಲದ ಪೂರ್ತಿಬಾಕಿ ಕಟ್ಟಬೇಕು ಎಂಬ ಆದೇಶ ಹಿಂಪಡೆಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ/ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿಂದು ಸೋಂಕಿತರ ಸಂಖ್ಯೆಯಲ್ಲಿ ಪಲ್ಲಟ: 2313 ಪಾಸಿಟಿವ್ ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿ ಈಗಾಗಲೇ ಹಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟುತ್ತಿರುವುದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಕೆಲೂರು : ಅರಣ್ಯಾಧಿಕಾರಿಗಳನ್ನು ಬಂಧಿಸಲು ಸೂಚಿಸಿದೆ- ಸಚಿವ ಶ್ರೀರಾಮುಲು

ಉತ್ತರಪ್ರಭಗದಗ: ಮುಂಡರಗಿ ತಾಲೂಕ ಕೆಲೂರು ಗ್ರಾಮದ ನಿರ್ಮಲಾ ಪಾಟೀಲರು ಒಂದು ವಾರದ ಹಿಂದೆ ಅರಣ್ಯಾಧಿಕಾರಿಗಳ ಕಿರುಕುಳದಿಂದ…