ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ ಪಾಸಿಟಿವ್
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.