ಒಂದು ಜಿಲ್ಲೆ ಒಂದು ಯೋಜನೆಗೆ ಬ್ಯಾಡಗಿ ಮೆಣಸಿನಕಾಯಿ ಆಯ್ಕೆ

ಗದಗ: ರಾಜ್ಯ ಜೀವ ವೈವಿಧ್ಯ ಮಂಡಳಿಯು ಗುರುತಿಸಿರುವ ಜೀವವೈವಿಧ್ಯ ಪಾರಂಪರಿಕ ತಾಣಗಳನ್ನು ಪರಿಣಾಮಕಾರಿಯಾಗಿ ಸಂರಕ್ಷಿಸಲು ಸೂಕ್ತ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ, ಅನೇಕ ಹೊಸ ತಾಣಗಳನ್ನು ಗುರುತಿಸಿ, ಘೋಷಿಸುವ ಪ್ರಯತ್ನ ಸಾಗಿದೆ ಎಂದು ರಾಜ್ಯ ಜೀವ ವೈವಿದ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ್ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಭವನದಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆತ್ಮ ನಿರ್ಭರ ಯೋಜನೆಯಡಿ ಒಂದು ಜಿಲ್ಲೆ ಒಂದು ಯೋಜನೆ ಎಂಬಂತೆ ಬ್ಯಾಡಗಿ ಮೆಣಸಿನಕಾಯಿಯನ್ನು ಆಯ್ಕೆ ಮಾಡಿಕೊಂಡಿದ್ದು ವಿಶೇಷ, ಅದರಂತೆ ಅಳಿವಿನಂಚಿನಲ್ಲಿರುವ ಸಿರಿಧಾನ್ಯಗಳನ್ನು ಬೆಳೆಯುವಂತೆ ರೈತರಿಗೆ ಮಾರ್ಗದರ್ಶನ ನೀಡುವುದು ಮತ್ತು ಸಿರಿಧಾನ್ಯಗಳ ಸಂಸ್ಕರಣಾ ಘಟಕಗಳ ನಿರ್ಮಾಣದ ಅಗತ್ಯವಿದೆ ಎಂದರು. ತೋಟಗಾರಿಕಾ ಇಲಾಖೆ ವತಿಯಿಂದ ಮಧುವನ ಯೋಜನೆಯಡಿಯಲ್ಲಿ ಜೇನು ಸಾಕಾಣಿಕೆಗೆ ಹೆಚ್ಚಿನ ಉತ್ತೇಜನ ನೀಡಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯಾದ್ಯಂತ ಮಂಡಳಿಯ ಅಧಿಕಾರಿಗಳು ಭೇಟಿ ನೀಡಿ, ಸೂಕ್ತ ಸಂರಕ್ಷಣಾ ಚಟುವಟಿಕೆಗಳತ್ತ ಗಮನ ಹರಿಸಿದ್ದು, ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ ಮಟ್ಟದಲ್ಲಿ ಸಮಾಲೋಚನೆ ಹಾಗೂ ಪರಿಶೀಲನೆ ಸಭೆ ನಡೆಸಿ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ರಚನೆ ಹಾಗೂ ಜೀವವೈವಿಧ್ಯ ದಾಖಲಾತಿ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ತ್ಯಾಜ್ಯ ವಿಲೇವಾರಿಯಲ್ಲಿ ಹಸಿ ಕಸದಿಂದ ಬಯೋ-ಗ್ಯಾಸ್ ತಯಾರಿಸಲು ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಸಲಹೆ ನೀಡಬೇಕು. ಜಿಲ್ಲೆಯ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಸಂವರ್ಧನೆಯಲ್ಲಿ ಸ್ಥಳೀಯರ ಪಾತ್ರ ಮಹತ್ವದ್ದಾಗಿದ್ದು, ಬಯೋ-ಡೈರ್ವಸಿಟಿ ಬೋರ್ಡ್ ಅಡಿಯಲ್ಲಿ ನದಿ, ಅರಣ್ಯ, ಕೆರೆ, ಮರಗಳ ರಕ್ಷಣೆಗೆ ಜಾಗೃತಿ ಮೂಡಿಸಬೇಕು. ರೈತರಿಗೆ ಸಾಂಪ್ರದಾಯಿಕ ಉತ್ಪನ್ನಗಳನ್ನು ಬೆಳೆಯಲು ಮಾಹಿತಿ ಒದಗಿಸಬೇಕು. ಜಿಲ್ಲೆಯ ವಿಶೇಷ ಬೆಳೆಗಳಿಗೆ ಜಾಗತಿಕ ಮನ್ನಣೆಯಾದ ಜಿಐ ಟ್ಯಾಗ್ ಪಡೆಯಲು ಪಾರಂಪರಿಕ ಬೆಳೆಗಳನ್ನು ಉತ್ತೇಜಿಸಬೆಕಾಗಿದೆ ಎಂದರು.

ಅಳಿವಿನಂಚಿನಲ್ಲಿರುವ ಸಸ್ಯಗಳ ತಳಿಗಳ ಅಭಿವೃದ್ಧಿಗೆ ಅವಶ್ಯಕ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ನಗರಸಭೆ ವ್ಯಾಪ್ತಿಯ ಕೆರೆಗಳ ನಿರ್ವಹಣೆ, ಮಾಲಿನ್ಯ ನಿಯಂತ್ರಣ, ಹೂಳೆತ್ತುವುದು, ಕೆರೆಯಲ್ಲಿ ಮೀನು ಸಾಕಾಣಿಕೆಗೆ ಪ್ರಾಶಸ್ತ್ಯಯ ನೀಡಬೇಕು. ಸ್ಥಳೀಯ ಕೆರೆ, ಭಾವಿಗಳ ಅಂತರ್ಜಲ ಅಭಿವೃದ್ಧಿಗೆ ಕಾರ್ಯ ಪ್ರವೃತ್ತರಾಗಬೇಕೆಂದರು. ಜಿಲ್ಲೆಯ ಶೆÀಟ್ಟಿಕೆರೆಯನ್ನು ವಿಶೇಷ ಪಾರಂಪರಿಕ ತಾನವಾಗಿ ಘೋಷಿಸಲು ಅಗತ್ಯದ ಕ್ರಮ ಜರುಗಿಸವುಂತೆ ತಿಳಿಸಿದರು.

ಅತೀಯಾದ ಪ್ಲಾಸ್ಟಿಕ್ ಬಳೆಕೆಯಿಂದ ಇಂದು ಪರಿಸರ ಮಾಲಿನ್ಯ ಹೆಚ್ಚಾಗುತ್ತಿದ್ದು ಪ್ಲಾಸ್ಟಿಕ ಬಳಕೆ ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯದ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ನಗರ, ಸ್ಥಳೀಯ-ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯವನ್ನು ಸೂಕ್ತವಾಗಿ ವಿಲೇವಾರಿ ಮಾಡಲು ಗಂಭೀರವಾಗಿ ಆಲೋಚಿಸುವಂತೆ ತಿಳಿಸಿದ ಅವರು ಜಿಲ್ಲೆಯಾದ್ಯಂತ ಅರಣ್ಯವೆಂದು ಪರಿಗಣಿಸಲ್ಪಟ್ಟ ಅಲ್ಲಿಯ ಕುರುಚಲು ಕಾಡು, ಅದರೊಟ್ಟಿಗಿರುವ ಜೀವ ಸಂಕುಲ, ಜೀವ ವೈವಿಧ್ಯತೆಯನ್ನು ಸಂರಕ್ಷಿಸುವದು ಪ್ರತಿಯೊಬ್ಬರ ಆದ್ಯ ಕರ್ತವವ್ಯವಾಗಿದೆ ಎಂದರು.

ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ ಜಿಲ್ಲೆಯಾದ್ಯಂತ ಅರಣ್ಯ ರಕ್ಷಣೆ ಮತ್ತು ಅಭಿವೃದ್ಧಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಜೀವ ವೈವಿಧ್ಯತೆ ರಕ್ಷಣೆ ಪರಿಸರ, ಅರಣ್ಯ, ಕೆರೆ ಸಂರಕ್ಷಣೆಗಾಗಿ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆಯೊಂದಿಗೆ ಕಾರ್ಯ ಪ್ರವೃತ್ತರಾಗುವಂತೆ ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ವ್ಹಿ.ಸೂರ್ಯಸೇನ್ ಮಾತನಾಡಿ, ಜಿಲ್ಲೆಯ 420 ಹೆ. ಭೂಮಿಯನ್ನು ಅರಣ್ಯವೆಂದು ಗುರುತಿಸಿದ್ದು ಕೇಂದ್ರ ಸರ್ಕಾರದ ಅನುಮೋದನೆಗೆ ಕಾಯ್ದಿದೆ. ಅಂತಹ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸುವಂತಿಲ್ಲ. ಜಿಲ್ಲೆಯ ಗಜೇಂದ್ರಗಡ, ಮುಂಡರಗಿ, ರೋಣದಲ್ಲಿ ಅರಣ್ಯವೆಂದು ಗುರುತಿಸಲಾದ 50ಹೆ. ಭಾಗದಲ್ಲಿ ಸಸಿ ನೆಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿಜ್ಞಾನಿ ಕೇಶವ ಮೂರ್ತಿ, ಕೃಷಿ, ತೋಟಗಾರಿಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು, ಪರಿಸರ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version