ಗದಗ: ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಆರ್‌ಟಿಇ, ಪೊಸ್ಕೋ-2011, ಬಾಲನ್ಯಾಯ ಕಾಯ್ವೆ-2015ರ ಅನುಷ್ಠಾನದ ಕುರಿತು ಭಾಗಿದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಲ್ಯ ವಿವಾಹ ನಡೆದಂತಹ ಸಂದರ್ಭದಲ್ಲಿ ಪೋಲೀಸ್ ಇಲಾಖೆಯು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆದ ನಂತರ ಬಾಲಕ ಅಥವಾ ಬಾಲಕಿಯರ ಚಟುವಟಿಕೆಗಳನ್ನು ಗಮನಿಸಿ ಅವರ ಬಗ್ಗೆ ಕಾಳಜಿ ವಹಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.

     ಕೋವಿಡ್-19 ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 41 ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಿದ್ದು ಇದನ್ನು ರಾಜ್ಯದಿಂದ ಮುಕ್ತಗೊಳಿಸಲು ಜಿಲ್ಲಾ ಮಟ್ಟದಲ್ಲಿ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಭೆ ಜರುಗಿಸಿ ಕಿರುಚಿತ್ರ, ಬಿತ್ತಿಪತ್ರಗಳ ಮೂಲಕ ಬಾಲ್ಯ ವಿವಾಹದ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲೆಯ ಎಲ್ಲ ಸರಕಾರಿ ಶಾಲಾ-ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಾದ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟಾಗಿ ಪಾಲಿಸಬೇಕು. ಬಿಕ್ಷಾಟನೆಗೊಳಗಾದ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅಂತಹ ಮಕ್ಕಳ ಶಿಕ್ಷಣಕ್ಕೆ ಸಹಕರಿಸಬೇಕು. ಎಲ್ಲ ಇಲಾಖೆಯ ಅಧಿಕಾರಿಗಳು ಬಾಲಕಾರ್ಮಿಕ ಪದ್ದತಿ, ಮಕ್ಕಳ ನಾಪತ್ತೆ ಪ್ರಕರಣಗಳನ್ನು ತಡೆಗಟ್ಟಲು ಶ್ರಮಿಸಬೇಕು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾವಾರು ಮಕ್ಕಳ ಮೇಲಾದ ದೌರ್ಜನ್ಯಗಳ ಕುರಿತು ಹಾಗೂ ಅಪ್ರಾಪ್ತ ಮಕ್ಕಳು ಗರ್ಭಿಣಿಯಾಗಿರುವ ಬಗ್ಗೆ ಮತ್ತು ಬಾಲಕಾರ್ಮಿಕ ಮಕ್ಕಳ ಕುರಿತು ಸಂಬಂಧಿಸಿದ ಇಲಾಖೆಗಳ ವರದಿಯಲ್ಲಿನ ಅಂಕಿ ಅಂಶಗಳನ್ನು ಪರಿಶೀಲಿಸಿದ ಆಯೋಗದ ಅಧ್ಯಕ್ಷರು ಇಲಾಖೆಯಿಂದ ಇಲಾಖೆಗೆ ನೀಡಿದ ಅಂಕಿ ಅಂಶಗಳು ತಾಳೆಯಾಗುತ್ತಿಲ್ಲ. ಇದನ್ನು ಗಮನಿಸಿದಾಗ ಸಮನ್ವಯತೆಯ ಕೊರತೆಯಿರುವುದು ಕಂಡು ಬಂದಿದ್ದು ಇದನ್ನು ಮರುಕಳಿಸದಂತೆ ಕಾರ್ಯನಿರ್ವಹಿಸಬೇಕು. ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳ ಸರಿಯಾದ ಅನುಷ್ಟಾನಗೊಳಿಸುವಲ್ಲಿ ಇಲಾಖೆಯ ಜವಾಬ್ದಾರಿ ಅಪಾರವಾಗಿದ್ದು ಕಟ್ಟುನಿಟ್ಟಿನ ಕಾನೂನುಗಳ ಜಾರಿಯಾಗುವುದರೊಂದಿಗೆ ಜಾಗೃತಿ ಮೂಡಿಸಬೇಕೆಂದು ಸೂಚಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಮಾತನಾಡಿ, ವಸತಿ ನಿಲಯಗಳಲ್ಲಿ ಮಕ್ಕಳನ್ನು ಪ್ರೀತಿಯಿಂದ ಗೌರವದಿಂದ ಕಾಣಬೇಕು. ವಿದ್ಯಾರ್ಥಿಗಳ ಪಠ್ಯಕ್ರಮದ ಕುರಿತಂತೆ ನಿಲಯಪಾಲಕರು ಮೇಲ್ವಿಚಾರಣೆ ಮಾಡಬೇಕು. ಶಿಕ್ಷಣ ಇಲಾಖೆಯು ಮಕ್ಕಳ ಹಕ್ಕು ಹಾಗೂ ಅವರ ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಬೇಕು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳ ಬಗ್ಗೆ ಕೂಡಲೆ ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

 ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಮಾತನಾಡಿ ಆಯೋಗವು ಎಲ್ಲಾ ಇಲಾಖಾಧಿಕಾರಿಗಳಿಗೆ ಆಯೋಗದ ಮಾರ್ಗದರ್ಶನದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಶಾಲೆಗಳಲ್ಲಿ ಪಿಂಕ್ ಶೌಚಾಯಗಳ ನಿರ್ಮಾಣ ವ್ಯವಸ್ಥೆ, ಜಲಜೀವನ್ ಮಿಷನ್ ಯೋಜನೆಯಡಿ ಅಂಗನವಾಡಿ ಮತ್ತು ಸರಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆಗೆ ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವಿನಾಶ್ ಗೊಡ್ಕಿಂಡಿಯವರು ಮಾತನಾಡಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬAಧಿಸಿದಂತೆ 2012 ರಿಂದ ಇಲ್ಲಿಯವರೆಗೆ ಒಟ್ಟು 135 ಪ್ರಕರಣಗಳು ದಾಖಲಾಗಿದ್ದು 39 ಪ್ರಕರಣಗಳು ಖುಲಾಸೆಯಾಗಿರುತ್ತವೆ. 51 ಪ್ರಕರಣಗಳಲ್ಲಿ ಶಿಕ್ಷೆಗೆ ಒಳಪಡಿಸಲಾಗಿದ್ದು. ಅದರಲ್ಲಿ 5 ಪ್ರಕರಣಗಳನ್ನು ಚಾರ್ಜ್ಶಿಟ್ ಮಾಡಲಾಗಿದೆ ಮತ್ತು ತನಿಖಾ ಹಂತದಲ್ಲಿ 49 ಪ್ರಕರಣಗಳು ಬಾಕಿ ಉಳಿದಿವೆ. ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 41 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 03 ಎಫ್.ಐ.ಆರ್ ದಾಖಲಾದ ಪ್ರಕರಣಗಳಾಗಿವೆ. 06 ಮಕ್ಕಳನ್ನು ಬಾಲಮಂದಿರದಲ್ಲಿ ಪುನರ್ವಸತಿಗೊಳಿಸಲಾಗಿದೆ. 33 ಮಕ್ಕಳನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಮಕ್ಕಳ ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ 2018ರಲ್ಲಿ 07 ಪ್ರಕರಣಗಳು ವರದಿಯಾಗಿದ್ದು 07 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2019ರಲ್ಲಿ 12 ಪ್ರಕರಣಗಳು ವರದಿಯಾಗಿದ್ದು 12 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2020ರಲ್ಲಿ 19 ಪ್ರಕರಣಗಳು ವರದಿಯಾಗಿದ್ದು 13 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಹಾಗೂ ತನಿಖಾ ವಿಚಾರದಲ್ಲಿ 06 ಪ್ರಕರಣಗಳು ಬಾಕಿ ಉಳಿದಿವೆ. 2021 ರಲ್ಲಿ 03 ಪ್ರಕರಣಗಳು ದಾಖಲಾಗಿದ್ದು 03 ಪ್ರಕರಣಗಳು ತನಿಖಾ ಹಂತದಲ್ಲಿವೆ ಎಂದು ವಿವರಿಸಿದರು.

 ಇದೇ ಸಂದರ್ಭದಲ್ಲಿ ಇಲಾಖೆಯು ಹೊರತಂದ ಪೊಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಶೋಕ.ಜಿ.ಯರಗಟ್ಟಿ. ಡಿ.ಶಂಕರಪ್ಪ, ಎಮ್.ಎಲ್.ಪರಶುರಾಮ ಎಚ್.ಸಿ.ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮಂಜಿನಾಥ ಬೊಮ್ಮನಕಟ್ಟಿ , ಜಿ.ಪಂ.ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ರಸ್ತೆ ಅಪಘಾತ ಮಗು ಸೆರಿ ಇಬ್ಬರ ದುರ್ಮರಣ

ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿಥಿ ಗಂಭಿರ. ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…

ಹೊರಟ್ಟಿ ಅವರಿಗೆ ರಾಜಕಾರಣ ಬೇಡ ಎನಿಸುತ್ತಿದೆಯಂತೆ! ಹಾಗಾದ್ರೆ ಮುಂದಿನ ನಡೆ?

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ರಾಜಕೀಯದಿಂದ ನಿವೃತ್ತಿ ಹೊಂದುವರೇ? ಹಿಗೊಂದು ಪ್ರಶ್ನೆ ಇದೀಗ ಅವರ ಮಾತಿನಿಂದಲೇ ಮೂಡಿದೆ. ಹೀಗಾಗಿ ರಾಜಕೀಯ ವಲಯದಲ್ಲಿ ಹೊರಟ್ಟಿ ಅವರ ಹೇಳಿಕೆ ಗುಸುಗುಸು ಚರ್ಚೆಗೆ ಮುನ್ನುಡಿ ಬರೆದಂತಾಗಿದೆ.