ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ಮಾದರಿ ಬದಲಾವಣೆ

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಜೂ.21 ರಿಂದ ಜುಲೈ 5ರ ವರೆಗೆ ಪರೀಕ್ಷೆ ನಡೆಯಲಿದೆ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆ ಮಾದರಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.

ಪ್ರತಿವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಇರುತ್ತಿತ್ತು. ಆದರೆ, ಈ ಬಾರಿ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳು ಇರಲಿದ್ದು, 10 ಅಂಕಗಳ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳ ಏರಿಕೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನಕೂಲ ಮಾಡಲಾಗಿದೆ ಎಮದು ತಿಳಿಸಿದರು.

ಎಂದಿನಂತೆ ಎಸ್ಸೆಸ್ಸೆಲ್ಸಿ ಬೋರ್ಡ್ ಸ್ಟ್ಯಾಂಡರ್ಡ್ ನಂತೆಯೇ ಪರೀಕ್ಷೆ ನಡೆಯಲಿದ್ದು, ಒಟ್ಟು 100 ಅಂಕಗಳಲ್ಲಿ 20 ಇಂಟರ್ನಲ್ ಅಂಕ ಮತ್ತು 80 ಮುಖ್ಯ ಪರೀಕ್ಷೆಯ ಅಂಕಗಳು ಇರಲಿವೆ. ಇದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಹೇಳಿದರು.

Exit mobile version