ಗದಗ ವೈದ್ಯ ಡಾ.ಪ್ರಕಾಶ ಹೊಸಮನಿ ಹೆಸರಲ್ಲಿ ಹಣಕ್ಕೆ ಬೇಡಿಕೆ!

ಗದಗ: ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸುವ ಮೂಲಕ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ಗದಗ ನಗರದಲ್ಲಿ ಬೆಳಕಿಗೆ ಬಂದಿದೆ.

ಇಲ್ಲಿನ ಜಿಮ್ಸ್ ವೈದ್ಯ ಡಾ.ಪ್ರಕಾಶ್ ಹೊಸಮನಿ ಇವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ವೈದ್ಯರ ಸ್ನೇಹಿತರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. dr.ವೈದ್ಯರ ಸ್ನೇಹಿತರಿಗೆ ಫೇಸ್ಬುಕ್ ಮೂಲಕ ತುರ್ತಾಗಿ 15 ಸಾವಿರ ಬೇಡಿಕೆಯ ಸಂದೇಶ ಕಳುಹಿಸಿದ್ದಾರೆ.

ಈ ವಿಷಯ ಸ್ನೇಹಿತರಿಂದ ಡಾ.ಪ್ರಕಾಶ ಅವರ ಗಮನಕ್ಕೆ ಬಂದಿದೆ. ಕೂಡಲೇ ಎಚ್ಚೆತ್ತುಕೊಂಡ ಡಾ.ಪ್ರಕಾಶ್ ತಮ್ಮೆಲ್ಲ ಸ್ನಾಹಿತರಿಗೆ ಫೇಸ್ಬುಕ್ ಮೂಲಕ ನನ್ನ ಹೆಸರಲ್ಲಿ ಹಣದ ಬೇಡಿಕೆ ಇಟ್ಟು ಸಂದೇಶ ಕಳುಹಿಸಿರುವುದು ನಕಲಿ ಸಂದೇಶಗಳಾಗಿವೆ. ಯಾರು ಕೂಡ ಇಂತಹ ಸಂದೇಶ ನಂಬಿ ಹಣ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. 

ವೈದ್ಯರ ಸಂಬಂಧಿಗೂ ನಕಲಿ ಖಾತೆಯಿಂದ ಹಣದ ಬೇಡಿಕೆ ಬಂದಿದೆ. ಆಗ  ದರೋಡೆಕೋರರಿಂದ ಮೊದಲು 1 ರೂ ಹಾಕಿಸಿಕೊಂಡಿದ್ದಾರೆ. ಈ ವೇಳೆ ಹಣ ಸಂದಾಯವಾದ ನಂತರ ದರೋಡೆಕೋರರ ಯುಟಿಐ ಸಂಖ್ಯೆ ಟ್ರೇಸ್ ಮಾಡಿದಾಗ ದರೋಡೆಕೋರರ ಹೆಸರನ್ನು ಸಹ ತೋರಿಸಿದೆ. ಈ ಮೂಲಕ ಸೈಬರ್ ಕ್ರೈಂ ದರೋಡೆಕೋರರನ್ನು ಪತ್ತೆ ಹಚ್ಚಬಹುದು ಅಂತಾರೆ ಡಾ.ಪ್ರಕಾಶ.

ಜಿಲ್ಲೆಯಲ್ಲಿ ಈ ಹಿಂದೆ ಪೊಲೀಸರನ್ನೂ ಬಿಡದೇ ಫೇಕ್ ಅಕೌಂಟ್ ಬಳಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಜನರನ್ನು ಯಾಮಾರಿಸುವ ಮೂಲಕ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುವ ಮೂಲಕ ಸುಲಿಗೆ ದಂಧೆಗಿಳಿಯುವಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಡಾ.ಪ್ರಕಾಶ ಹೊಸಮನಿ ಒತ್ತಾಯವಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಸೋಂಕು ನಿಯಂತ್ರಣ:ಹೆಚ್ಚುವರಿ ನಿಯಂತ್ರಣ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿಗಳ ಆದೇಶ

ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ…

ಸಮಾಜ ಕಲ್ಯಾಣಾಧಿಕಾರಿ ಖಾಜಾಹುಸೇನ್ ಮುಧೋಳ್ ನಿಧನ

ಗದಗ: ಸಮಾಜ ಕಲ್ಯಾಣಾಧಿಕಾರಿ ಖಾಜಾಹುಸೇನ್ ಮುಧೋಳ್ ಬುಧವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮೂಲತ: ಗದಗ ನಗರದವರಾದ…

ಭೀಕರ ದುರಂತದಲ್ಲಿ ಮೃತಪಟ್ಟವರೆಲ್ಲ ನಿಡಗುಂದಿ ಭಾಗದವರು- ಕಾಶಿಗೆ ಹೋಗಿಬಂದವರೇ ಈಗ ರಾಮೇಶ್ವರಕ್ಕೆ ಹೊರಟಿದ್ದರು

ಆಲಮಟ್ಟಿ : ಅವರೆಲ್ಲರೂ ಕಾಶಿಗೆ ಹೋಗಿ ಬಂದಿದ್ದರು. ಕಾಶಿ ದರ್ಶನ ಬಳಿಕ ರಾಮೇಶ್ವರ ದರುಶನಕ್ಕೆ ಶೃದ್ಧಾಭಕ್ತಿ…

ಪಂಚಾಯತಿ ಚುನಾವಣೆ: ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ

ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.