ಗದಗ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಬಿ.ಎಫ್.ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಜಿಲ್ಲೆಯ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. 10ನೇ ತರಗತಿಯ ಕನಿಷ್ಟ ವಿದ್ಯಾರ್ಹತೆ ಹೊಂದಿರಬೇಕು. 45 ವರ್ಷಕ್ಕಿಂತ ಕಡಿಮೆ ವಯೋಮಿತಿ ಉಳ್ಳವರಾಗಿರಬೇಕು.

ಅರ್ಜಿ ಸಲ್ಲಿಸಲು ಮಾ.25 ಕೊನೆಯ ದಿನವಾಗಿದ್ದು ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಜಿಲ್ಲಾ ಪಂಚಾಯತ ಕಛೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಪಂಚಾಯತ ಕಛೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08372-235947 ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಡ್ರಗ್ಸ್ ವಿಚಾರ: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಬಂಧನ

ಇತ್ತಿಚೆಗೆ ಕೆಲವು ದಿನಗಳಿಂದ ಡ್ರಗ್ಸ್ ವಿಷಯ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರ ನಟಿಯ ಡ್ರಗ್ಸ್ ಜಾಲದ ಬೆನ್ನಲ್ಲೆ ಈಗ ಜನಪ್ರತಿನಿಧಿಗಳ ಪುತ್ರರೀಗೂ ಈ ನಂಟು ವ್ಯಾಪಿಸುತ್ತಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆ!

ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ…

ಅಪಾಯ ಮಟ್ಟ ಹರಿಯುತ್ತಿರುವ ಭೀಮಾ….ಜನರ ರಕ್ಷಣೆಗೆ ಬಂದ ಸೇನೆ!

ಕಲಬುರಗಿ : ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ಜನರ ಬದುಕು ಮೂರಾಬಟ್ಟೆಯಾಗಿದೆ. ಈ ನಿಟ್ಟಿನಲ್ಲಿ ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ ಮಾಡಲಾಗಿದೆ.

ಇನ್ಮುಂದೆ ಪೊಲೀ‍‍ಸರಿಗೆ ವಾರದ ರಜೆ ಕಡ್ಡಾಯ

ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ. ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.