ಗದಗ: ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯವು ಪ್ರತಿ ತಿಂಗಳ 1 ರಿಂದ 10ನೇ ದಿನಾಂಕದವರೆಗೆ ಮಾತ್ರ ಆಯಾ ಸ್ಥಳೀಯ ನ್ಯಾಯಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ.


ಆದ್ದರಿಂದ ಇದುವರೆಗೂ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಸದಸ್ಯರು ತಮ್ಮ ಪಡಿತರ ಚೀಟಿ ಆಧಾರ್ ಕಾರ್ಡ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಗ್ಯಾಸ್ ಬುಕ್ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಊರಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಕೊಳ್ಳಬೇಕು. ಅಂತ್ಯೋದಯ ಮತ್ತು ಆದ್ಯತಾ ಬಿಪಿಎಲ್ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರೂ ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಸಂಕಷ್ಟ – ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಿದ ಸರ್ಕಾರ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸಂಕಷ್ಟ ಮುಂದುವರೆದ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಧಾರಗಳನ್ನು ಕೈಗೊಂಡಿದೆ. ಈ…

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಜಂತ್ಲಿ-ಶಿರೂರು ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಜೂಜಾಟ: ಹತ್ತು ಜನರ ಬಂಧನ

ರೋಣ: ಇಲ್ಲಿನ ಬಿಸಿಎಂ ಹಾಸ್ಟೇಲ್ ಸಮೀಪದಲ್ಲಿರುವ ರಸ್ತೆಯ ಬದಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಹತ್ತು ಜನರನ್ನು ರೋಣ ಪೋಲಿಸರು ಬಂಧಿಸಿದ್ದಾರೆ, ಬಂಧಿತರಿಂದ 21,160 ರೂ, ವಶಪಡಿಸಿಕೊಳ್ಳಲಾಗಿದೆ.