ಗಜೇಂದ್ರಗಡ: ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.
ಪಟ್ಟಣದ ಬಿ.ಎಸ್.ಸಿಂಹಾಸನದ ಸರ್ಕಾರಿ ಪ್ರಥಮ ದರ್ಜೆ ವಿದ್ಯಾಲಯದ ಐಕ್ಯೂಎಸಿ ಮತ್ತು ಉದ್ಯೋಗ ಮಾಹಿತಿ ಘಟಕ ಹಾಗೂ ಯುವ ಸಬಲೀಕರಣ, ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ ಸಂಯುಕ್ತಾಶ್ರಯದಲ್ಲಿ ಜೀವನ ಕೌಶಲ್ಯ ಮತ್ತು ಅರಿವು ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಉದ್ಯೋಗ ಮಾಹಿತಿ ಘಟಕ ಸಂಚಾಲಕ ಮಹೇಂದ್ರ. ಜಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನಕ್ಕಿಂತ ಹೆಚ್ಚಾಗಿ ಜೀವನದ ಕೌಶಲ್ಯಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಬದುಕುವ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಗಳಾಗಳು ಸಾಧ್ಯ. ಜಗತ್ತಿನಲ್ಲಿರುವ ಪ್ರತಿ ವ್ಯಕ್ತಿಗೂ ಸಮಸ್ಯೆ, ಒತ್ತಡಗಳು ಇರುತ್ತವೆ. ಪ್ರತಿಯೊಂದು ಸಮಸ್ಯೆಗಳಿಗೂ ತನ್ನದೇ ಆದ ವ್ಯಾಪ್ತಿಯಿರುತ್ತದೆ. ಆ ವ್ಯಾಪ್ತಿ ಅಡಿಯಲ್ಲಿ ನಾವು ಸಮಸ್ಯೆ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.
ಯುವ ಸ್ಪಂದನ ಕೇಂದ್ರ ತರಬೇತಿ ಅಧಿಕಾರಿ ಚೇತನ್, ಡಾ.ಪಿ.ಎಚ್.ಕ್ಯಾರಕೊಪ್ಪ, ಲಕ್ಷ್ಮಿ ಪಿ, ಲಕ್ಕಣ್ಣ ಈ.ಎನ್, ಸರಸ್ವತಿ ಕೆ, ಡಾ.ಕರುಣೇಶ್‌ಕುಮಾರ್ ಕೆ, ಹಿತೇಶ್ ಬಿ, ಸಿದ್ದೇಶ ಕೆ, ರೂಪ ಟಿ.ಪಿ, ಮಹಾಂತೇಶ ಜೀವಣ್ಣವರ, ಆರ್.ವಿ.ಸುಂಕದ, ಬಿ.ವಿ.ಮನವಳ್ಳಿ ಇದ್ದರು.

Leave a Reply

Your email address will not be published. Required fields are marked *

You May Also Like

ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.

ರಾಜ್ಯದಲ್ಲಿಂದು 5007 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5007 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85870 ಕ್ಕೆ ಏರಿಕೆಯಾದಂತಾಗಿದೆ.

ನೈತಿಕ ಮೌಲ್ಯದಿಂದ ಸುಂದರ ಭವಿಷ್ಯ- ಹೇಮಗಿರಿಮಠ

ಉತ್ತರಪ್ರಭ ಸುದ್ದಿಆಲಮಟ್ಟಿ: ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಭವಿಷ್ಯ ರೂಪಗೊಳ್ಳುತ್ತದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ…

ಇಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.