ಗದಗ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗÀಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ.20ರವರೆಗೆ ವಿಸ್ತರಿಸಲಾಗಿದೆ. ವೆಬ್‌ಸೈಟ್ ವಿಳಾಸ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005/8050770004 ಆಗಿರುತ್ತದೆ.
ಗದಗ ಜಿಲ್ಲೆಯಲ್ಲಿ ವಸತಿ ನಿಲಯಕ್ಕೆ ಅರ್ಜಿ: ಅವಧಿ ವಿಸ್ತರಣೆ
