ಬೆಂಗಳೂರು: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಜನರು ತತ್ತರಗೊಂಡಿದ್ದು, ದುಬಾರಿಯಾಗಿರುವುದರಿಂದ ಸೆಸ್ ಇಳಿಕೆ ಮಾಡಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಆದರೆ, ಬಹುತೇಕ ರಾಜ್ಯಗಳಿಂದ ಸೆಸ್ ಇಳಿಸಲು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೆಟ್ರೋಲ್ ತೆರಿಗೆ ಇಳಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಪೆಟ್ರೋಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ. ಏನೇ ಮಾಡುವುದಿದ್ದರೂ ಕೇಂದ್ರ ಸರ್ಕಾರವೇ ಮಾಡಬೇಕು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿಯೂ ಪೆಟ್ರೋಲ್ ದರ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಸಿಎಂ, ಪೆಟ್ರೋಲ್ ಮೇಲಿನ ಸೆಸ್ ಕಡಿಮೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ನಿವೃತ್ತ ಪಿಡಿಓ ಟಿ. ಮಹಮದಲಿ ನಿಧನ

ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ…

ಶಾಸಕರೇ, ಆದರಳ್ಳಿ ಗ್ರಾಮದ ಬಗ್ಗೆ ಇಷ್ಟೇಕೆ ನಿರಾಸಕ್ತಿ?

ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ತಾಲೂಕಿನ ಆದರಹಳ್ಳಿ ಗ್ರಾಮದ ವಡ್ಡರ್ ಪಾಳ್ಯದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ.