ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮರುಪಾವತಿ ಪಡೆಯಲು ಮಾ.1 ರಿಂದ 31 ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಿಗಮದ ವಿವಿಧ ಯೋಜನೆಯಡಿಯಲ್ಲಿ ಸಾಲ ಪಡೆದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಜೈನ್ ಫಲಾನುಭವಿಗಳಿಗೆ ತಿಳುವಳಿಕೆ ನೀಡಿ ಸಾಲದ ಮೊತ್ತವನ್ನು ಮರುಪಾವತಿ ಮಾಡಬೇಕೆನ್ನುವ ಉದ್ದೇಶದಿಂದ ಮರುಪಾವತಿ ಅಭಿಯಾನ ಕೈಗೊಳ್ಳಲಾಗುತ್ತಿದೆ.
ಮರುಪಾವತಿ ಅಭಿಯಾನಕ್ಕೆ ಕೇಂದ್ರ ಕಚೇರಿಯಿಂದ ವಿಭಾಗವಾರು ಉಸ್ತುವಾರಿ ಅಧಿಕಾರಿಗಳು ಆಗಮಿಸಲಿದ್ದಾರೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸ್ಮಶಾನದಲ್ಲಿ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ

ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.

ಅಸುಂಡಿ ಬಾಲಕಿ ಕೊಲೆ ಪ್ರಕರಣ:24 ಗಂಟೆಯಾದರು ಇನ್ನೂ ಪತ್ತೆಯಾಗದ ಹಂತಕರು

ಗದಗ: ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಬುಧವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿ 24 ಗಂಟೆ ಕಳೆದರು ಇನ್ನೂ ಅರೋಪಿಗಳ ಪತ್ತೆಯಾಗಿಲ್ಲ.

ಜೈಲುವಾಸದಿಂದ ಇಂದು ಶಶಿಕಲಾ ಬಿಡುಗಡೆ

ಕಳೆದ ೪ ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆಯಾಗುವರು. ಕೊರೊನಾ ಸೋಂಕು ತಗುಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿಯೇ ಪ್ರಕ್ರಿಯೆ ಪೂರ್ಣಗೊಳಿಸಲಿರುವ ಜೈಲ್ ಸಿಬ್ಬಂದಿ ಅವರನ್ನು ಬಿಡುಗಡೆ ಮಾಡಲಿದ್ದಾರೆ ತಿಳಿಸಿದೆ.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.