ಬೆಂಗಳೂರು : ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ.

ತಮ್ಮ ಬಳಿ ಹಲವರ ಸಿಡಿಗಳಿವೆ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿಕೆ ನೀಡಿದ ಬೆನ್ನಲ್ಲೇ ಈ ಸಚಿವರು ನ್ಯಾಯಾಲಯಕ್ಕೆ ಹೋಗಿರುವುದು ಕುತೂಹಲ ಮೂಡಿಸಿದೆ. ರಾಜಶೇಖರ ಮುಲಾಲಿ ಅವರನ್ನು 68ನೇ ಪ್ರತಿವಾದಿಯನ್ನಾಗಿಸಲಾಗಿದೆ.

ಮುಂಬೈಗೆ ತೆರಳಿದ್ದ ಸಚಿವರಾದ ಭೈರತಿ ಬಸವರಾಜ, ಶಿವರಾಮ ಹೆಬ್ಬಾರ್, ಡಾ.ಕೆ.ಸುಧಾಕರ, ಎಸ್.ಟಿ.ಸೋಮಶೇಖರ, ಬಿ.ಸಿ.ಪಾಟೀಲ, ನಾರಾಯಣ ಗೌಡ ನ್ಯಾಯಾಲಯಕ್ಕೆ ಮೊರೆ ಹೋದವರು.

ಇವರ ಜೊತೆಗೆ ಇಂದು ಇನ್ನೂ 6 ಸಚಿವರು ನ್ಯಾಯಾಲಯಕ್ಕೆ ರ‍್ಜಿ ಸಲ್ಲಿಸಲಿದ್ದಾರೆ. ನಾವು ಮುಂಬೈಗೆ ಹೊದವರೆಲ್ಲ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂದು ಸೋಮಶೇಖರ ಹೇಳಿದ್ದಾರೆ. ನಮ್ಮ ವಿರುದ್ಧ ಮೊದಲಿನಿಂದಲೂ ಷಢ್ಯಂತ್ರ ನಡೆಯುತ್ತಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕರ‍್ಟ್ ಮೆಟ್ಟಿಲೇರುತ್ತೇವೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸಬಾರದು ಎಂದು ಒಟ್ಟೂ 67 ಮಾಧ್ಯಮಗಳನ್ನು ಎದುರುದಾರರನ್ನಾಗಿಸಿ ಈ ಸಚಿವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಂದು ಅಜಿ೵ಯ ವಿಚಾರಣೆ ನಡೆಯಲಿದೆ.

Leave a Reply

Your email address will not be published. Required fields are marked *

You May Also Like

ರಂಗಭೂಮಿ ಕ್ಷೇತ್ರ: ಗದಗಿನ ಸಾವಿತ್ರಿ ಗೌಡರ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಉತ್ತರಪ್ರಭ ಸುದ್ದಿಬೆಂಗಳೂರು: ಕರ್ನಾಟಕ ಸರ್ಕಾರ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 66…

ಕೊರೊನಾ ಸಂಕಷ್ಟ: ತುರ್ತು ಸಭೆ ಕರೆದ ಸಿಎಂ ಯಡಿಯೂರಪ್ಪ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತುರ್ತು ಸಭೆ…

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6245…

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.