ಗಜೇಂದ್ರಗಡ: ಸಮೀಪದ ಲಕ್ಕಲಕಟ್ಟಿ ಗ್ರಾಮ ಪಂಚಾಯತಿಯ ಲಕ್ಕಲಕಟ್ಟಿ ತಾಂಡಾಕ್ಕೆ ತಾಂಡಾ ರೋಜಗಾರ ಮಿತ್ರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾ. 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರಬೇಕು. 45 ವರ್ಷ ಮೀರಿರಬಾರದು. ತಾಂಡಾ ನಿವಾಸಿ ಆಗಿರಬೇಕು. ಮಹಿಳೆಯರಿಗೆ ಮೊದಲ ಆದ್ಯತೆ, ಮಹಿಳೆಯರು ಅರ್ಜಿ ಸಲ್ಲಿಸದಿದ್ದಾಗ ಪುರುಷರನ್ನು ಆಯ್ಕೆಗೆ ಪರಿಗಣಿಸಲಾಗುವುದು. ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಿರುವವರಿಗೆ ಆದ್ಯತೆ ನೀಡಲಾಗುವುದು. ಓದು ಮತ್ತು ಬರಹ ಚನ್ನಾಗಿ ತಿಳಿದಿರಬೇಕು. ಕನ್ನಡ ಮತ್ತು ಲಂಬಾಣಿ ಭಾಷೆ ತಿಳಿದಿರಬೇಕು. ಅಭ್ಯರ್ಥಿ ಸಂವಹನ ಕೌಶಲ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣ ಹೊಂದಿರಬೇಕು.

ತಾಂಡಾಗಳಲ್ಲಿನ ಪ್ರತಿ 250 ರಿಂದ 300 ಮನೆಗಳಿಗೆ ಒಬ್ಬರಂತೆ ತಾಂಡಾ ರೋಜಗಾರ್ ಮಿತ್ರರನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ ಪಡೆದು ಅರ್ಜಿ ಸಲ್ಲಿಸಬೇಕು ಎಂದು ಗಜೇಂದ್ರಗಡ ತಾಲ್ಲೂಕು ಪಂಚಾಯ್ತಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಅಭಿಮಾನಿಗಳಿಂದ ಪುನಿತ್ ರಾಜಕುಮಾರ ಜನ್ಮದಿನಾಚರಣೆ

ಉತ್ತರಪ್ರಭ ಮುಳಗುಂದ : ಚಿತ್ರನಟ ದಿ.ಪುನಿತ್ ರಾಜಕುಮಾರ ಅವರು 47 ನೇ ಜನ್ಮದಿನದ ಅಂಗವಾಗಿ ಇಲ್ಲಿನ…

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…

ಶೀಘ್ರ 16000 ಪೊಲೀಸ್ ಸಿಬ್ಬಂದಿ ನೇಮಕ: ಸಚಿವ ಬೊಮ್ಮಾಯಿ

ರಾಜ್ಯ ಪೊಲೀಸ್‌ ಇಲಾಖೆಗೆ ನೂತನ 16 ಸಾವಿರ ಪೊಲೀಸ್‌ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 82 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ