ಕೋಲಾರ : ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಪಂಚಾಯಿತಿ ಹೊರಗುತ್ತಿಗೆ ಆಧಾರದ ಮೇಲೆ ತಾಲೂಕು ಪಂಚಾಯಿತಿ ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ತಾಂತ್ರಿಕ ಸಹಾಯಕರು 4 (ತೋಟಗಾರಿಕೆ 3, ಅರಣ್ಯ 1) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಖುದ್ದಾಗಿ ಸಲ್ಲಿಕೆ ಮಾಡುವುದು.

ತಾಂತ್ರಿಕ ಸಹಾಯಕರು ತೋಟಗಾರಿಕೆ 3 ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ತೋಟಗಾರಿಕೆ ವಿಷಯದಲ್ಲಿ ಬಿ. ಎಸ್‌ಸಿ/ ಎಂ. ಎಸ್‌ಸಿ ವ್ಯಾಸಂಗ ಮಾಡಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ 21 ರಿಂದ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಗೆ ಫಾರೆಸ್ಟರಿ ವಿಷಯದಲ್ಲಿ ಬಿ. ಎಸ್‌ಸಿ/ ಎಂ. ಎಸ್‌ಸಿ ವ್ಯಾಸಂಗ ಮಾಡಿರಬೇಕು. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು. ವಯೋಮಿತಿ 21 ರಿಂದ 40 ವರ್ಷ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 24,000 (ಪ್ರಯಾಣ ಭತ್ಯೆ ಪ್ರತಿ ಕಿ. ಮೀ.ಗೆ 5 ರೂ. ನಂತೆ ಗರಿಷ್ಠ ಮಾಸಿಕ ರೂ. 1,500).

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವಿ. ಸತೀಶ್ ಕುಮಾರ್, ಎಡಿಪಿಸಿ, ಜಿಲ್ಲಾ ಪಂಚಾಯಿತಿ ಕೋಲಾರ, ದೂರವಾಣಿ ಸಂಖ್ಯೆ 9108735005 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ‌ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕಾರ್ಮಿಕ ಇಲಾಖೆ: ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ…

ರೋಣದಲ್ಲಿ ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ಹುಳುಗಳ ದಾಳಿ ಮಾಡಿದ ಘಟನೆ ನಡೆದಿದೆ.

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.