ಮುಂಡರಗಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.
ಬಸ್ ಬ್ರೆಕ್ ಫೇಲ್ ಆಗಿ ಅಪಘಾತಕ್ಕಿಡಾಗುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮುತವರ್ಜಿ ವಹಿಸಿದ್ದರಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದರು.
ಶಿರಹಟ್ಟಿಯಿಂದ ಮುಂಡರಗಿ ಪಟ್ಟಣಕ್ಕೆ ಬರುತ್ತಿದ್ದ ಬಸ್ ಬ್ರೇಕ್ ಫೇಲ್ ಆಗುತ್ತಿದ್ದಂತೆ ಕ್ಷಣಮಾತ್ರದಲ್ಲಿ ಬಸ್ ಚಾಲಕ ಎಚ್ಚೆತ್ತುಕೊಂಡಿದ್ದಾನೆ. ಈ ವೇಳೆ ರಸ್ತೆಗೆ ಹೊಂದಿಕೊಂಡ ಗುಡ್ಡಕ್ಕೆ ಬಸ್ ಏರಿಸಿ ಪ್ರಯಾಣಿಕರ ಪ್ರಾಣ ರಕ್ಷಣೆ ಮಾಡಿದ್ದಾನೆ. ಈ ಮೂಲಕ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಬಸ್ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾನೆ. ಇದರಿಂದ ಚಾಲಕನ ಈ ಕಾರ್ಯ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಯಿತು.