ಡಂಬಳ : ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.
ಈ ವೇಳೆ ಶಿಂಗಟರಾಯನಕೇರಿ ತಾಂಡೆಯಲ್ಲಿ ನರೇಗಾ ವ್ಯಾಪ್ತಿಯ ಕಾರ್ಯದಲ್ಲಿ ತೊಡಗಿಕೊಂಡಿದ್ದ ಬಗರ್ ಹುಕುಂ ಸಾಗುವಳಿದಾರರಿದ್ದಲ್ಲಿಗೆ ತೆರಳಿದ ಮಹಾಸಭಾ ಪದಾಧಿಕಾರಿಗಳು, ಅರಣ್ಯ ಭೂಮಿಯ ಹಕ್ಕಿಗಾಗಿ ಹಕ್ಕೊತ್ತಾಯದ ಬಗೆಗೆ ಜಾಗೃತಿ ಮೂಡಿಸಿದರು. ಈ ವೇಳೆ ಮಾತನಾಡಿದ ಮಹಾಸಭಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ, ಈಗಾಗಲೇ ಜಿಲ್ಲೆಯಾದ್ಯಂತ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಅಭಿಯಾನ ಆರಂಭಿಸಲಾಗಿದೆ. ರೈತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು. ಅರಣ್ಯ ಹಾಗೂ ಹುಲ್ಲುಗಾವಲು ಪ್ರದೇಶದಲ್ಲಿ ತಲೆತಲಾಂತರದಿಂದ ಉಳುಮೆ ಮಾಡುತ್ತಿರುವ ರೈತರ ಭೂಮಿಯನ್ನು ಕಸಿದುಕೊಂಡರೆ ಅದು ಅರಣ್ಯ ಇಲಾಖೆ ಬಡವರ ಮೇಲೆ ದೌರ್ಜನ್ಯ ಎಸಗಿದಂತೆಯೇ ಸರಿ ಎಂದರು.
ಇದೇ ವೇಳೆ ಮಾತನಾಡಿದ ಗ್ರಾಮಸ್ಥರು ಅರಣ್ಯ ಇಲಾಖೆ ಹಕ್ಕುಪತ್ರ ನೀಡಲು ಮೀನಮೇಷ ಎಣಿಸುತ್ತಿರುವುದರ ಬಗ್ಗೆ ಕಿಡಿಕಾರಿದರು. ತದ ನಂತರ ಡೋಣಿ ತಾಂಡೆಯಲ್ಲೂ ಅಭಿಯಾನ ಕೈಗೊಳ್ಳಲಾಯಿತು.
ಗಣೇಶ ರಾಠೋಡ, ಭೀಮಸೇನ ಪವಾರ, ವಿನಾಯಕ ರಾಠೋಡ, ಶಂಕರ ಲಮಾಣಿ, ಎಲ್.ಎಲ್.ಚವ್ಹಾಣ, ಪಾಂಡಪ್ಪ ಮೇಘಾವತ್, ಪ್ರಕಾಶ ಬಮ್ಮನಪಾಡ ಮುಂತಾದವರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಕೊರೊನಾಗೆ ಬಲಿಯಾದವರು ಎಷ್ಟು ಜನ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ.

ಅಕ್ಕಿ ಕೊಡಿ ಎಂದಿದ್ದಕ್ಕೆ ಸತ್ತು ಹೋಗು ಎಂದ ಅಹಾರ ಸಚಿವ

ಪಡಿತರದಲ್ಲಿನ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಸತ್ತು ಹೋಗು ಎಂದು ಹೇಳಿ ಉಡಾಫೆತನ ವರ್ತಿಸಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.