ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.

2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಹಿಂದುಳಿದ ವರ್ಗಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3 ಬಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹಾಗೂ ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಯುವಕರಿಗೆ ಬೈಕ್ ಖರೀದಿಸಲು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ 25 ಸಾವಿರ ರೂ.ಗಳ ಸಹಾಯ ಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾ.25 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಫಲಾಪೇಕ್ಷಿಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬಳ್ಳಾರಿ ಇಲ್ಲಿ ಉಚಿತ ಅರ್ಜಿಗಳನ್ನು ಪಡೆಯಬಹುದಾಗಿದೆ. ಅಲ್ಲದೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಮಾ.25 ರೊಳಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: www.dbcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಬಳ್ಳಾರಿ. 08392-267038 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಅಕ್ಟೋಬರ್ ನಲ್ಲಿ ಗ್ರಾಪಂ ಚುನಾವಣೆ ?ಜುಲೈ 13ರಿಂದ ಮತದಾರರ ಪಟ್ಟಿ ಪ್ರಕ್ರಿಯೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣೆಗಳನ್ನು ಅಕ್ಟೋಬರ್ ನಲ್ಲಿ ನಡೆಸುವ ಸಾಧ್ಯತೆ ಇದ್ದು. ಇದೇ ಜುಲೈ…

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ಇಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಕೋವೀಡ್ ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.