ಬೆಂಗಳೂರು: ಚಲನಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾಗಿದ್ದ ಸ್ಯಾಂಡಲ್‌ವುಡ್ ಇದೀಗ ತಾನೇ ಚೇತರಿಸಿಕೊಳ್ಳುತ್ತಿದೆ. ಆರ್ಥಿಕತೆ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.

ಹೀಗಾಗಿ ಸಿನಿಮಾ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಮಾಡಿಕೊಡಬೇಕೆಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸರ್ಕಾರ ರಾಜಕೀಯ ಸಭೆ, ಸಮಾರಂಭ, ರ್ಯಾಲಿಗಳನ್ನು ಬಂದ್ ಮಾಡಬೇಕು. ಆ ಮೂಲಕ ಕೊರೊನಾ ತಡೆಗಟ್ಟಬಹುದಾಗಿದೆ ರ್ಯಾಲಿಗಳಲ್ಲಿ ಸಾವಿರಾರು ಮಂದಿ ಬೇರೆ ಬೇರೆ ಊರುಗಳಿಂದ ಆಗಮಿಸುವುದರಿಂದ ಸೋಂಕು ತಗುಲುವ ಸಾಧ್ಯತೆ ಇರುತ್ತದೆ.

ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇದನ್ನು ಬಿಟ್ಟು ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಅಗ್ನಿ ಅವಘಡ ತಪ್ಪಿದ ಬಾರಿ ದುರಂತ

ತಾಲೂಕಿನ ಸುಗನಹಳ್ಳಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಸ್ಪರ್ಶಗೊಂಡು ಹೊಟ್ಟಿನ ಬಣವಿ ಸುಟ್ಟು ಕರಕಲಾದ ಘಟನೆ ಜರುಗಿದೆ.

ಆನ್ಲೈನ್ ಸಹಾಯದಿಂದ ಯುವಕರಲ್ಲಿ ಜಾನಪದ ಆಸಕ್ತಿ ಮೂಡಿಸುತ್ತಿರುವ ಡಾ.ಬಾಲಾಜಿ

ಕನ್ನಡ ಜಾನಪದ ಯುವ ಬ್ರಿಗೇಡಿನ ಮೂಲಕ ಯುವ ಜನಾಂಗವನ್ನು ಎಚ್ಚರಿಸುವ ಹಾಗೂ ಅವರನ್ನು ಜಾನಪದ ಕಲೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರೆಪಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲೂ ಆಪ್ ಸಹಾಯದಿಂದ ಯುವಕರನ್ನು ಸೇರಿಸಿ ಅವರಿಗೆ ಜಾನಪದ ಕಲೆಯ ಸೊಗಡು ಉಣ ಬಡಿಸುವ ಕಾರ್ಯ ಮಾಡುತ್ತಿದ್ದಾರೆ.