ಗದಗ: ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.

ಕೇಂದ್ರ ಮೃಗಾಲಯ ಪ್ರಾಧಿಕಾರವು ಬಿಂಕದಕಟ್ಟಿ ಕಿರು ಮೃಗಾಲಯಕ್ಕೆ ಜೋಡಿ ಸಿಂಹಗಳ ಹಸ್ತಾಂತರಕ್ಕೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಎರಡು ಗಂಡು ಸಿಂಹಗಳು ಆಗಮಿಸಿವೆ.

ಸಿಂಹಗಳು ಸ್ವಚ್ಛಂದವಾಗಿ ವಿಹರಿಸಲು ಅನುಕೂಲಕರವಾದ ವಾತಾವರಣ ನಿರ್ಮಿಸಲಾಗಿದೆ. ಇದಕ್ಕಾಗಿ 1 ಸಾವಿರ ಚ.ಮೀ. ಸ್ಥಳ ಮೀಸಲಿಡಲಾಗಿದ್ದು, ಸಿಂಹಗಳಿಗಾಗಿ ಪ್ರಾಣಿ ಸಂಗ್ರಹಾಲಯದಲ್ಲಿ ನೈಸರ್ಗಿಕ ಆವಾಸ ಸ್ಥಾನದ ಮಾದರಿಯಲ್ಲೇ ವಿಶೇಷ ಪಂಜರ ಸಿದ್ದಪಡಿಸಲಾಗಿದೆ. ಕಲ್ಲಿನ ಬಂಡೆಗಳು, ನೀರಿನ ಹೊಂಡ, ಗಿಡ-ಮರಗಳಿರುವಂತೆ ಸಿದ್ಧಪಡಿಸಲಾಗಿದೆ.

ಬಿಂಕದಕಟ್ಟಿ ಸಂಗ್ರಹಾಲಯದಲ್ಲಿ ಕತ್ತೆ ಕಿರುಬ ವೀಕ್ಷಿಸಲು ಗಾಜಿನ ಪರದೆಯ ವ್ಯವಸ್ಥೆ ಮಾಡಿದ್ದು, ಅದರಂತೆ ಸಿಂಹಗಳನ್ನು ವೀಕ್ಷಿಸಲು 39 ಎಂಎಂ ಗಾಜಿನ ಪರದೆ ವ್ಯವಸ್ಥೆ ಮಾಡಲಾಗಿದೆ. ಈ ಗಾಜುಗಳನ್ನು ಚಂಡಿಗಢದಿಂದ ತರಿಸಿಕೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕದಲ್ಲೇ ಬಿಂಕದಕಟ್ಟಿ ಮೃಗಾಲಯವು ಎರಡು ವರ್ಷಗಳ ಹಿಂದಷ್ಟೇ ಜೋಡಿ ಹುಲಿಗಳನ್ನು ಹೊಂದಿರುವ ಖ್ಯಾತಿ ಪಡೆದಿತ್ತು. ಇದೀಗ ಜೋಡಿ ಸಿಂಹಗಳು ಆಗಮಿಸುವ ಮೂಲಕ ಮೃಗಾಲಯದ ಮೆರಗನ್ನು ಇನ್ನಷ್ಟು ಹೆಚ್ಚಿಸಿವೆ.

ಧರ್ಮಾರ್ಜುನ ಸಿಂಹಗಳೆರಡು ಬಯಲು ಸೀಮೆಯ ಪರಿಸರಕ್ಕೆ ಹೊಂದಿಕೊಳ್ಳುವವರೆಗೆ ಸದ್ಯ ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿಲ್ಲ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿ ಅನ್ವಯ ಸಿಂಹಗಳನ್ನು 15-30 ದಿನಗಳವರೆಗೆ ನಿಗಾದಲ್ಲಿಟ್ಟು, ಇಲ್ಲಿನ ಪರಿಸರಕ್ಕೆ ಹೊಂದಿಕೊಂಡ ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಸ ಕಲ್ಪಿಸಲಾಗುವುದು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ತಹಸೀಲ್ದಾರ್ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ

ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ.

ಭಾರಿ ಕುತೂಹಲ ಕೆರಳಿಸಿದ 35ನೇ ವಾರ್ಡನ ಮತದಾನ

ಗದಗ: ಗದಗ ಬೆಟಗೇರಿ ನಗರಸಭೆ ಮತದಾನ ಪ್ರಕ್ರಿಯೆ ಇಂದು ಸಾಯಂಕಾಲ ಮುಕ್ತಾಯ ವಾಗಿದೆ.ನಗರಸಭೆಯ 35 ವಾರ್ಡಗಳ…