ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ವರ್ತನೆಯಿಂದ ಆತಂಕಗೊಂಡಿರುವ ಶಿಕ್ಷಣ ಇಲಾಖೆ, ಇದೀಗ ಮಕ್ಕಳ ಹಿತ ಕಾಪಾಡಲು ಮುಂದಾಗಿದೆ. ಹೀಗಾಗಿ ಶಾಲಾ ಶುಲ್ಕದ ವಿಚಾರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಶಾಲಾ ಶುಲ್ಕದ ವಿಚಾರವಾಗಿ ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿದ್ದ. ಅದಾದ ಬಳಿಕ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಮನವಿ ಮಾಡಿಕೊಂಡಿತ್ತು. ಆದರೆ, ಆ ಬಳಿಕವೂ ಖಾಸಗಿ ಶಾಲೆಗಳ ಧೋರಣೆಯಲ್ಲಿ ಬದಲಾವಣೆ ಆಗಿಲ್ಲ. ಕೊರೊನಾ ಲಾಕ್‌ಡೌನ್‌ನಿಂದಾಗಿ ಶಾಲಾ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರ ಪರಿಸ್ಥಿತಿ ತೀರಾ ಭಿನ್ನವಾಗಿಯೇನೂ ಇಲ್ಲ. ಆದರೆ ಖಾಸಗಿ ಶಾಲೆಗಳಿಗೆ ಹೋಲಿಕೆ ಮಾಡಿದರೆ ಪಾಲಕರು, ಪೋಷಕರ ಸ್ಥಿತಿ ಗಂಭೀರವಾಗಿದೆ. ಅದರ ಅರಿವೂ ಸರ್ಕಾರಕ್ಕಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಶಾಸಗಿ ಶಿಕ್ಷಣ ಸಂಸ್ಥೆಗಳ ಧನದಾಹದಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.

ಶಾಲಾಡಳಿತ ಮಂಡಳಿಗಳು ಮತ್ತು ಪೋಷಕರ ನಡುವಿನ ಇಂತಹ ಸಂಘರ್ಷಗಳು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದರಿಂದ, ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ಪ್ರಕರಣಗಳಿಗೆ ಎಡೆಯಾಗದಂತೆ ವರ್ತಿಸಬೇಕಾದ ಅಗತ್ಯವನ್ನು ನಾನು ಪದೇ ಪದೇ ಹೇಳಿದ್ದೇನೆ. ಈ ರೀತಿಯ ಪ್ರಕರಣಗಳು ಮರುಕಳಿಸಿದರೆ ಇಲಾಖೆ ತನ್ನ ಪರಮಾಧಿಕಾರವನ್ನು ಚಲಾಯಿಸಬೇಕಾಗುತ್ತದೆ ಎಂಬುದನ್ನು ಶಾಲಾಡಳಿತ ಮಂಡಳಿಗಳು ತಿಳಿದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಿಟಿಟಿಸಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ವರ್ಲ್ಡ್ ಸ್ಕಿಲ್ ಕಾಂಪಿಟೆಶನ್ ಗೆ ಆಯ್ಕೆ

ಧಾರವಾಡ: ರಾಯಪುರ್ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿರುವ ಜಿಟಿಟಿಸಿ ಸಂಸ್ಥೆ ಇಬ್ಬರು ವಿದ್ಯಾರ್ಥಿಗಳು ವರ್ಲ್ಡ್ ಸ್ಕಿಲ್ ಕಂಪೇಟೇಷನಲ್ಲಿ…

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು 12 ವಾರ್ಡನಲ್ಲ ಬಿಜೆಪಿ

ನಗರ ಸಭೆ ಚುನಾವಣೆ: 27 ಮತ್ತು 18  ನೇ ವಾರ್ಡಿನಲ್ಲಿ ಕಾಂಗ್ರೇಸ್ಗೆ ಜಯ  7 ಮತ್ತು…

ಅನೈತಿಕ ಸಂಬಂಧ : ಪತಿ ಕೊಲೆ, ಇಬ್ಬರ ಬಂಧನ

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರೀಯಕರನ ಜತೆಗೂಡಿ ಪತಿನ್ನೆ ಕೊಲೆ ಮಾಡಿರುವ ಘಟನೆ ಸಮೀಪದ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ನಡೆದಿದೆ.

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…