ಬೆಂಗಳೂರು : ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.
ಉಪನ್ಯಾಸಕರ ನೇಮಕ ಸಂಬಂಧಿಸಿದಂತೆ ಪಿಯು ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಪ್ರಸ್ತಾವನೆ ಪರಿಶೀಲಿಸಿದ ಸರ್ಕಾರ ಇದೀಗ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆ ನೀಡಿದ್ದು, 2021ನೇ ಸಾಲಿನ ಫೆಬ್ರವರಿ ತಿಂಗಳಿಂದ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆದೇಶಿಸಿದೆ.