ಮುಳಗುಂದ: ತಾಲೂಕಿನ ನಾಗಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಾವಿ ತಾಂಡದಲ್ಲಿ ಹಾಗೂ ಬಿಂಕದಕಟ್ಟಿ, ಮಲ್ಲಸಮುದ್ರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಭಾನುವಾರ ಶಾಸಕ ಎಚ್.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು 84ಲಕ್ಷ ರೂ ಅನುದಾನದಲ್ಲಿ ತಾಂಡಾದ 371 ಮನೆಗಳಿಗೆ ಕುಡಿಯುವ ನೀರು ಸರಬರಾಜು ಪೈಪಲೈನ್, ನಳ ಜೋಡನೆ ಹಾಗೂ 50 ಸಾವಿರ ಲೀ ಸಾಮರ್ಥ್ಯದ ಮೇಲ್ಮಟ್ಟದ ಜಲ ಸಂಗ್ರಹಗಾರ ನಿರ್ಮಾಣವಾಗಲಿದೆ. ಕಾಲಮಿತಿಯೊಳಗೆ ಕಾಮಗಾರಿ ಪೂರ್ಣ ಮಾಡಬೇಕು. ಎಂದು ಗುತ್ತಿಗೆದಾರನಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ವಾಸಣ್ಣ ಕುರಡಗಿ, ತಾ.ಪಂ ಮಾಜಿ ಅಧ್ಯಕ್ಷ ಬಿ.ಆರ್ ದೇವರೆಡ್ಡಿ, ಗ್ರಾ.ಪಂ ಅಧ್ಯಕ್ಷೆ ಹನುಮವ್ವ ಸಿದ್ನೇಕೊಪ್ಪ, ಉಪಾಧ್ಯಕ್ಷ ಸುರೇಶ ಪವಾರ, ಸದಸ್ಯರಾದ, ಸೋಮಪ್ಪ ಪವಾರ, ಯಮನಪ್ಪ ಬಾಗಲಕೋಟಿ, ಕುಬೇರಪ್ಪ ರಾಠೋಡ, ಹಜರೇಸಾಬ ನದಾಫ, ಕಾಳಪ್ಪ ಪವಾರ, ಮುಖಂಡರಾದ ದಯಾನಂದ ಪವಾರ, ಮಾನಪ್ಪ ತೋಟದ, ಸರೋಜಾ ತೋಟದ, ಹಾಗೂ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಸಾರಾಯಿ ಅಂಗಡಿ ಆರಂಭದಿಂದ ಶಿಸ್ತು ಮಾಯವಾಗಿದೆ: ಶಾಸಕ ಎಚ್.ಕೆ.ಪಾಟೀಲ್

ಲಾಕ್ ಡೌನ್ ಹಿನ್ನೆಲೆ ಕಳೆದ 45 ದಿನಗಳಿಂದ ಸಾರಾಯಿ ಅಂಗಡಿ ಬಂದ ಇರುವುದರಿಂದ ಜನರಲ್ಲಿ ಶಿಸ್ತು ಇತ್ತು. ಆದರೆ ಕಳೆದ ಎರಡು ದಿನಗಳಿಂದ ಮತ್ತೆ ಸಾರಾಯಿ ಅಂಗಡಿ ಆರಂಭವಾಗಿದ್ದರಿಂದ ಜನರಲ್ಲಿ ಶಿಸ್ತು ಮಾಯವಾಗಿದೆ.

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…

ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆ ಭೂ ಕಂಪನ ಅನುಭವ

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ  ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ  ಸೇರಿದಂತೆ ಮಂಡ್ಯದಲ್ಲಿಯೂ…

ಡ್ರಗ್ಸ್ ಮಾರಾಟ : ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ

ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆ ಸೇರಿ ಇಬ್ಬರನ್ನು ಬಂಧಿಸಿ 35 ಲಕ್ಷ ರೂ. ಮೌಲ್ಯದ 350 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.