ವಿಶ್ವ ಅರಣ್ಯ ದಿನಾಚರಣೆ
ಶಿರಹಟ್ಟಿ:
ಕಾಡು ಬೆಳೆಸಿ ನಾಡು ಉಳಿಸಿ ಎಂಬ ವಾಖ್ಯೆದಂತೆ ಪ್ರತಿಯೊಬ್ಬರು ಗಿಡಗಳನ್ನು ಬೆಳೆಸಿ ಉತ್ತಮವಾದ ಆರೋಗ್ಯವನ್ನು ಪಡೆದುಕೊಳ್ಳುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪಪಂ ಅಧ್ಯಕ್ಷ ಪರಮೇಶ ಪರಬ ಹೇಳಿದರು.

ಸ್ಥಳೀಯ ಸಾಮಾಜಿಕ ಅರಣ್ಯ ಇಲಾಖೆಯಿಂದ ರವಿವಾರ ನಡೆದ ವಿಶ್ವ ಅರಣ್ಯ ದಿನಾಚರಣೆಯನ್ನು ಸಸಿ ನೆಟ್ಟು ಅದಕ್ಕೆ ನೀರುಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮರ, ಗಿಡಗಳನ್ನು ಕಡಿದು ಅರಣ್ಯ ನಾಶ ಮಾಡುವುದು ಅಪರಾಧವಾಗಿದೆ. ಮೂಲಭೂತ ಸೌಲಭ್ಯಗಳಲ್ಲಿ ಉತ್ತಮವಾದ ಗಾಳಿಯು ಸಹ ಒಂದಾಗಿದ್ದು, ಅರಣ್ಯ ಉಳಿದರೆ ಮಾತ್ರ ಮನುಷ್ಯ ಹಾಗೂ ಪ್ರಾಣಿ ಸಂಕುಲಗಳು ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಅರಣ್ಯ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉಳಿಸಲು ಯುವ ಜನಾಂಗ ಪಣ ತೊಡಬೇಕಾಗಿದ್ದು, ಮರಗಿಡಗಳನ್ನು ಪೋಷಣೆ ಮಾಡಿ ಪರಿಸರ ಉಳಿವಿಗಾಗಿನಾವೆಲ್ಲರೂ ಪಣ ತೊಡಬೇಕು ಎಂದು ಹೇಳಿದರು.
ಪಪಂ ಉಪಾಧ್ಯಕ್ಷ ಇಸಾಕ ಆದ್ರಳ್ಳಿ, ಸದಸ್ಯ ದೀಪು ಕಪ್ಪತ್ತನವರ, ತಾಪಂ ಸದಸ್ಯ ತಿಪ್ಪಣ್ಣ ಕೊಂಚಿಗೇರಿ, ಜಗದೀಶ ತೇಲಿ, ಶರಣಪ್ಪ ಹರ್ಲಾಪೂರ, ವಿನಾಯಕ ಪರಬತ, ಬಸವಣ್ಣೆಪ್ಪ ತುಳಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಪಿ.ಹೊಸಳ್ಳಿ, ಉಪ ವಲಯ ಅರಣ್ಯಾಧಿಕಾರಿ ಶಂಕರ ಕೊನಪ್ಪನವರ, ಮಾಂತೇಶ ಲಮಾಣಿ, ಮಂಜುನಾಥ ಮಾಳಗಿ, ಲೇಪಾಕ್ಷಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಕುರಿ, ಮೇಕೆ ಕಳ್ಳರು ಅಂದರ್..!

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಕೆ ಹಾಗೂ ಕುರಿ ಕಳ್ಳತನ ಪ್ರಕರಣಗಳು ಕಂಡು ಬಂದಿದ್ದವು. ಘಟನೆ ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿತ್ತು. ಆದರೆ ಕೊನೆಗೂ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಕ್ಟೋಬರ್ ನಲ್ಲಿ ಗ್ರಾಮ ಪಂಚಾಯತಿ ಚುನಾವಣೆ?

ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು…

ಶೋಷಿತ ಸಮುದಾಯಗಳು ಮೀಸಲಾತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಿ

ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಸಚಿವ ಸುಧಾಕರ್ ನೀಡಿದ ಮಾಹಿತಿ

ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.