ಧಾರವಾಡ: ಈಗಾಗಲೇ ದಿನದಿಂದ ದಿನಕ್ಕೆ ಕೊರೋನ ಎರಡನೇ ಅಲೆ ಆರಂಭವಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಈ ಕುರಿತು ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್ ವಿಚಾರವಾಗಿ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡುವುದಿಲ್ಲ. ಆಯಾ ರಾಜ್ಯದಲ್ಲಿ ಕೊರೊನಾ ಬಗ್ಗೆ ಅವರು ಕ್ರಮಗಳನ್ನ ಕೈಗೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಬಗ್ಗೆ ತಜ್ಞರು ಚರ್ಚೆ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣ ಮಾಡಬೇಕು ಎಂಬ ವಿಚಾರದಲ್ಲಿ ಸರಕಾರ ಕ್ರಮ ಕೈಗೊಂಡಿದೆ ಎಂದರು.

ಉಪ ಚುಣಾವಣೆಯಲ್ಲಿ ಮೂರು ಕಡೆ ಬಿಜೆಪಿ ಗೆಲುವು ಸಾಧಿಸಲಿದೆ. ಎರಡು ವಿಧಾನಸಭಾ ಹಾಗೂ ಒಂದು ಲೋಕಸಭೆಯಲ್ಲಿ ಜಯಭೇರಿ ಬಾರಿಸಲಿದೆ. ಎಸ್‌ಐಟಿ ಸಿಎಂ, ಗೃಹ ಸಚಿವರ ಕೈಯಲ್ಲಿ ಕೆಲಸ ಮಾಡುತ್ತದೆ ಎಂಬ ಯತ್ನಾಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, 2016 ರಲ್ಲಿ ಸಚಿವರೊಬ್ಬರ ಸಿಡಿ ಪ್ರಕರಣ ನಡೆದಿತ್ತು. ಆ ಸಮಯದಲ್ಲಿ ರಾಜ್ಯ ಸರಕಾರದ ಎಸ್‌ಐಟಿ ವಿಚಾರಣೆ ಮಾಡಿತ್ತು. ಯಾವಾಗಲೂ ಪೋಲಿಸರು ಕಾನೂನು ಪ್ರಕಾರ ವಿಚಾರಣೆ ಮಾಡುತ್ತಿದ್ದಾರೆ. ಎಸ್‌ಐಟಿಯನ್ನ ಸ್ವತಂತ್ರವಾಗಿ ಬಿಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You May Also Like

ಬಿಜೆಪಿ ಅಸ್ಪೃಶ್ಯತೆಯನ್ನು ಮರುಸ್ಥಾಪಿಸುತ್ತಿದೆ

ಬಿಜೆಪಿ ತನ್ನ ಮನುವಾದಿ ಸಿದ್ಧಾಂತವನ್ನು ಸಮಾಜದೊಳಗೆ ವ್ಯವಸ್ಥಿತವಾಗಿ ಮತ್ತೆ ಸ್ಥಾಪಿಸುತ್ತಿದೆ.

ಗಡಿಬಿಡಿಯ ಲಾಕ್ ಡೌನ್ ಜಾರಿ: ಗಲಿಬಿಲಿಯಲ್ಲಿ ಉತ್ಪಾದನಾ ಫ್ಯಾಕ್ಟರಿ

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಹಲವು ಜಿಲ್ಲೆ ಮತ್ತು ನಗರಗಳಲ್ಲಿ ದಿಢೀರ್ ಲಾಕ್ ಡೌನ್ ಹೇರಿದ್ದರಿಂದ ಕೈಗಾರಿಕಾ ಉತ್ಪಾದನಾ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಸಮಾಜ ಕಲ್ಯಾಣಾಧಿಕಾರಿ ಖಾಜಾಹುಸೇನ್ ಮುಧೋಳ್ ನಿಧನ

ಗದಗ: ಸಮಾಜ ಕಲ್ಯಾಣಾಧಿಕಾರಿ ಖಾಜಾಹುಸೇನ್ ಮುಧೋಳ್ ಬುಧವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮೂಲತ: ಗದಗ ನಗರದವರಾದ…