ಗಜೇಂದ್ರಗಡ: ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಗಜೇಂದ್ರಗಡ ಹಾಗೂ ರೋಣ ತಾಲ್ಲೂಕು ಮಟ್ಟದ ಕನ್ನಡ ವಿಷಯ ಶಿಕ್ಷಕರ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಕರ ಜವಾಬ್ದಾರಿಯಾಗಿದೆ. ಅದನ್ನು ನಾವೇಲ್ಲರೂ ಜವಾಬ್ದಾರಿಯುತವಾಗಿ ನಿಬಾಯಿಸಬೇಕು. ಅಲ್ಲದೇ ಶಿಕ್ಷಕರು ಸದಾ ಅಧ್ಯಯನಶೀಲರಾಗಿರುವುದರ ಜೊತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಉತ್ತಮ ಫಲಿತಾಂಶ ತರಲು ಶ್ರಮಿಸಬೇಕು ಎಂದರು.

ಶಿಕ್ಷಕ ಶಿವಾನಂದ ಮಠದ ಮಾತನಾಡಿ, ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇವೆ. ಹೀಗಾಗಿ ಶಿಕ್ಷಕರು ಜವಾಬ್ದಾರಿ ವಹಿಸಿ ಶಿಕ್ಷಣದಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿಸ ಶಾಲಾ ಹಂತದಲ್ಲಿ ಕಠಿಣ ವಿಷಯಗಳ ಬಗ್ಗೆ ಪರೀಕ್ಷೆ ಬರೆಸಿ ಮೌಲ್ಯಮಾಪನ ಮಾಡಿ ಮಕ್ಕಳು ಪಡೆದ ಅಂಕಗಳ ಬಗ್ಗೆ ಅರಿತು ಅವರಿಗೆ ಮಾರ್ಗದರ್ಶನ ನೀಡಬೇಕು. ಪೋಷಕರ ಸಭೆ, ಮನೆ ಮನೆ ಭೇಟಿ, ರಸಪ್ರಶ್ನೆ, ಸಂವಾದದಂತ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಕಾರ್ಯಾಗಾರದಲ್ಲಿ ಶಿಕ್ಷಕ ಎಂ.ವಿ.ನಾಡಗೇರ, ಎಚ್.ವೈ.ನದಾಫ, ಮಹಾಂತೇಶ ಚಳಕಿ, ಎಂ.ವಿ.ಲೂತಿಮಠ, ಎಲ್.ಬಿ.ಬಸವರಡ್ಡೇರ, ಐ.ಬಿ.ಕುರಿ, ಅನ್ನಪೂರ್ಣ ಹಿರೇಮಠ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ನೀವು ಸರ್ಕಾರಿ ಜಮೀನು ಲೀಜ್ ಪಡೆದಿದ್ದಿರಾ? ಆ ಜಮೀನು ನಿಮ್ಮದಾಗಲಿದೆ..!

ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ…

ಟೋಲ್ ಗಳಲ್ಲಿ ಶುಲ್ಕ ವಿನಾಯಿತಿಗೆ ಒತ್ತಾಯಿಸಿ ಮನವಿ

ಗದಗ: ರಾಜ್ಯ ಹೆದ್ದಾರಿ 45ರ ಪಾಪನಾಶಿ ಹಾಗೂ ಕೊರ್ಲಹಳ್ಳಿ ಬಳಿಯ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಣೆ…

ರಾಜ್ಯದಲ್ಲಿಂದು 308 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824…

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.