ಗದಗ ಜಿಲ್ಲೆಯಲ್ಲಿ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಗದಗ: ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲಾ ಪಂಚಾಯತ ವ್ಯಾಪ್ತಿಯಡಿ ಬರುವ 57 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 57 ಖಾಲಿ ಇರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ದಿ 1-1-2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ ಹೊಂದಿರಬೇಕು.

ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ (2018-19, 2019-20 ಮತ್ತು 2020-21) ಕನಿಷ್ಠ ಎರಡು ವರ್ಷ ಯೋಜನೆಯಡಿ ಅರಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಿರಬೇಕು. ವಯೋಮಿತಿ 45 ವರ್ಷ ಮೀರಿರಬಾರದು. ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನು ಹೊಂದಿರಬೇಕು.

ಗ್ರಾಮ ರೋಜ್‌ಗಾರ ಮಿತ್ರರರಿಗೆ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು. ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏ.10 ಆಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version