ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಗದಗ: ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಮಾರ್ಚ 29 ರಿಂದ 31 ವರೆಗೆ ಜರುಗಬೇಕಿದ್ದ ಗದಗ ತಾಲ್ಲೂಕಿನ ಲಕ್ಕುಂಡಿ ಹಜರತ್ ಜಿಂದೇಶ್ಯಾವಲಿ ಉರುಸನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ಆದೇಶ ಹೊರಡಿಸಿರುತ್ತಾರೆ.

ಈ ಆದೇಶವನ್ನು ಉಲ್ಲಂಘಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಜರಿಗಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Exit mobile version