ಶಿರಹಟ್ಟಿ: ತಾಲೂಕಿನ ಸುಗನಹಳ್ಳಿ ಗ್ರಾಮದ ಆಲದಮ್ಮ ಕೆರೆಯ ಅಭಿವೃದ್ಧಿಗೆ ಟೆಂಡರ್ ಕರೆದಿದ್ದು, ಪ್ರಾಮಾಣಿಕ ಗುತ್ತಿಗೆದಾರರಿಗೆ ಅಧಿಕಾರಿಗಳು ಕಾಮಗಾರಿ ನೀಡುವುದರ ಮೂಲಕ ಸಾರ್ವಜನಿಕರ ಹಿತದೃಷ್ಟಿ ಕಾಯಬೇಕೆಂದು ಬನ್ನಿಕೊಪ್ಪ ಗ್ರಾಪಂ ಅಧ್ಯಕ್ಷ ಸಿದ್ದಲಿಂಗಯ್ಯ ಹೊಂಬಾಳಿಮಠ ಆಗ್ರಹಿಸಿದರು.

ಈ ಕುರಿತು ಉತ್ತರಪ್ರಭದೊಂದಿಗೆ ಮಾತನಾಡಿದ ಇವರು ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬಜೆಟ್‌ನಲ್ಲಿ ತಾಲೂಕಿನ ಸುಗನಹಳ್ಳಿಯ ಆಲದಮ್ಮ ಕೆರೆಗೆ 10ಕೋಟಿ ಅನುದಾನ ಮೀಸಲಿರಿಸಿದ್ದರು. ಸದ್ಯ ಆಡಳಿತದಲ್ಲಿರುವ ಯಡಿಯೂರಪ್ಪ ನೇತೃತ್ವ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈಗಾಗಲೇ ಎರಡು ಬಾರಿ ಟೆಂಡರ್ ಕರೆದು ರದ್ದುಪಡಿಸಲಾಗಿತ್ತು. ಸದ್ಯ 3ನೇ ಬಾರಿ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದ್ದು, ಟೆಂಡರ್ ಕರೆದು ರದ್ದು ಮಾಡುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ಕೂಡಲೇ ಪ್ರಾಮಾಣಿಕ ಗುತ್ತಿಗೆದಾರರಿಗೆ ಟೆಂಡರ್ ನೀಡಿ ಕಾಮಗಾರಿ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಿಲ್ಲಾ ನ್ಯಾಯಾದೀಶನ ವಜಾಕ್ಕೆ ಒತ್ತಾಯಿಸಿ ಫೆ.1ರಂದು ಬಂಜಾರ ಸಮಾಜದಿಂದ ಪ್ರತಿಭಟನೆ

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ಸಂವಾದ ನಡೆಸಿದ ಶಾಸಕ ನಡಹಳ್ಳಿ..! ಅನುದಿನವೂ ಇಷ್ಟಪಟ್ಟು ಓದಿ ಭವಿಷ್ಯ ಕಟ್ಟಿಕೊಳ್ಳಿ ಗುಲಾಬಚಂದ ಜಾಧವ;

ಉತ್ತರಪ್ರಭ ಆಲಮಟ್ಟಿ: ದಿನದ 24 ಗಂಟೆಯಲ್ಲಿ ಎಷ್ಟು ಕಾಲ ಓದ್ತಿರಾ, ಟಿವಿ ನೋಡ್ತಿರಾ, ಹರಟೆ ಹೋಡ್ತಿರಾ,…

ಫೆ.27,28 ರಂದು ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಜಿಲ್ಲಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ಜಿಲ್ಲಾ ಸಾಹಿತ್ಯ ಭವನದಲ್ಲಿ ಜರುಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಶರಣು ಗೋಗೇರಿ ಹೇಳಿದರು.