ಶೋಷಿತ ಸಮುದಾಯಗಳು ಮೀಸಲಾತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಿ

ಬೆಂಗಳೂರು : ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆಯುತ್ತಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸ್ವಾತಂತ್ರ‍್ಯ ನಂತರದಿAದ ಈ ವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹ ಇವೆ ಅವೆಲ್ಲವುಗಳಿಗೆ ಸರ್ಕಾರ ಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Exit mobile version