ತಹಸೀಲ್ದಾರ್ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ

ರೋಣ: ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಮಾರ್ಚ 28 ರಂದು ಅಟಲ್ ಭೀಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಅಡುಗೆ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ದರಿಂದ, ಕೊರೊನಾ ನಿಯಂತ್ರಣಕ್ಕಾಗಿ ಶಾಲೆಯನ್ನು ಶೀಲ್ಡೌನ್ ಮಾಡಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಕಲು ಪೊಲೀಸ್ ಇಲಾಖೆಯವರಿಗೆ ಹಾಗೂ ಸ್ಯಾನಿಟೇಸೇರ ಮಾಡಲು ಪುರಸಭೆಯವರಿಗೆ ಆದೇಶೀಸಿದ್ದರು. ತಾಲೂಕು ದಂಡಾಧಿಕಾರಿಗಳು ಹೊರಡಿಸಿದ ಆದೇಶವನ್ನು ಪಾಲಿಸದೇ ಉಲ್ಲಂಘಿಸಿದ್ದಾರೆ.

ನಮ್ಮ ಮಕ್ಕಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಶಾಲೆಯಲ್ಲಿ ಸರಿಯಾದ ನೀರಿನ ವ್ಯವಸ್ಥೆ ಇಲ್ಲ. ಇಕ್ಕಟ್ಟಾದ ಕೊಠಡಿಗಳಲ್ಲಿ ನಮ್ಮ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಜೊತೆಗೆ ಸರಿಯಾದ ಸೌಲಭ್ಯಗಳಿಲ್ಲ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವುದು ಸಹಜ. ಮುಂದೆ ನಮ್ಮ ಮಕ್ಕಳ ಭವಿಷ್ಯ ಏನಾಗುವದು ಎಂಬ ಭಯ ನಮ್ಮನ್ನು ಕಾಡುತ್ತಿದೆ. ಈ ಪರಸ್ಥಿತಿ ನೋಡಿದರೆ ತಾಲೂಕಾಡಳಿತವು ಕೋವಿಡ್ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಪಾಲಕರ ನೇರವಾಗಿ ಆರೋಪವಾಗಿದೆ.

Exit mobile version