ಬೆಳಗಾವಿ : ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.

ಸುದ್ದಿಗಾರರೊAದಿಗೆ ಮಾತನಾಡಿದ ಅವರು, ಶಿವಾಜಿ ಮಹಾರಾಜರು, ಬಸವೇಶ್ವರ ಸೌಹಾರ್ದತೆ ಪ್ರತಿಕವಾಗಿದ್ದರು. ಸರ್ಕಾರ ಮರಾಠಾ ಸಮುದಾಯದ ಅಭಿವೃದ್ಧಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದಾರೆ. ಸುರೇಶ್ ಅಂಗಡಿ ಪತ್ನಿ ಗೆಲ್ಲಿಸಲು ಶ್ರಮಿಸುತ್ತೇವೆ. ಬೆಳಗಾವಿಯಲ್ಲಿ ಬಿಜೆಪಿ ಪರ ಅನುಕಂಪದ ಅಲೆಯಿದೆ ಮಸ್ಕಿ, ಬಸವಕಲ್ಯಾಣ ದಲ್ಲಿ ರಾಜ್ಯ ಸರ್ಕಾರದ ಅಭಿವೃದ್ಧಿ ಮೇಲೆ ಗೆಲ್ಲುತ್ತೇವೆ ಎಂದು ವಿಶ್ವಾ ವ್ಯಕ್ತ ಪಡಿಸಿದರು.

ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಯಾಕ ಬೆಳಗಾವಿ ಅಭಿವೃದ್ಧಿಗೆ ಶ್ರಮಿಸಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಸುವರ್ಣ ವಿಧಾನಸೌಧ ಕಟ್ಟಿದಿವಿ. ಕಾಂಗ್ರೆಸಗೆ ಏನು ಗುರಿ ಇಲ್ಲ. ಕಾಂಗ್ರೆಸ್‌ನವರು ಬರೀ ಸುಳ್ಳು ಭರವಸೆ ಕೊಡ್ತಾರೆ. ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರವೂ ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಕಚೇರಿ ಸ್ಥಳಾಂತರ ಮಾಡ್ತಿವಿ. ನಮಗೆ ಸ್ವಲ್ಪ ಸಮಯ ಕೊಡಿ ಎಂದರು.

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಬಿಜೆಪಿಗೆ ಮೈನ್ಸ್ ಆಗುತ್ತೆ ಎಂದ ಸಿದ್ದರಾಮಯ್ಯ ಹೇಳಿಕೆ ಪ್ರತಿಕ್ರೀಯಿಸಿ, ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ. ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ರೈತರ ಹೋರಾಟಕ್ಕೆ ಸ್ಪಂದಿಸಿ ಶೀರ್ಘದಲ್ಲೆ ರೈತರ ಬೇಡಿಕೆಗಳನ್ನ ಈಡೇರಿಸಲು ಭರವಸೆ

ಉತ್ತರಪ್ರಭ ಸುದ್ದಿ ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತರು ಶಿಂಗಟಾಲೂರ ಏತ ನೀರಾವರಿ ಎಡದಂಡೆ…

24ರಂದು ನಗರ ಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ…

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…