ಮಾಸ್ಕ-ಸಾಮಾಜಿಕ ಅಂತರಕಡ್ಡಾಯ : ಪಾಲಿಸದಿದ್ದರೆ ದಂಡ

ಬೆಂಗಳೂರು : ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

          ಸುದ್ದಿಗೋಷ್ಠಿ ಮಾತನಾಡಿದ ಅವರು, ಈಗಾಗಲೇ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಏ.5 ರಿಂದ ಕಾರ್ಯಾರಂಭ ಮಾಡಲು ಸಜ್ಜುಗೊಳಿಸಲಾಗಿದೆ. ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲು ತಂಡ ರಚಿಸಲಾಗಿದೆ. ಸಂಪರ್ಕಿತ ಪತ್ತೆಗೆ ಕಂದಾಯ, ಶಿಕ್ಷಣ ಇಲಾಖೆಯ ಸಿಬ್ಬಂದಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರ, ಗ್ರಾಮಾಂತರ ಸರ್ಕಾರ ಆಸ್ಪತ್ರೆಗಳಲ್ಲಿ 1,630 ಬೆಡ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗಾಗಿ ಸಿದ್ಧರಿರುವಂತೆ ತಿಳಿಸಲಾಗಿದೆ.

            ಅನುದಾನಕ್ಕಾಗಿ 1,500 ಕೋಟಿ ಮೀಸಲು ಇಡಲಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸೋದು, ಸಾಮಾಜಿಕ ಅಂತರ ಕಾಪಾಡಬೇಕು. ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ವೈಜ್ಞಾನಿಕ ರೀತಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ತಿಳಿಸಿದ್ದಾರೆ. ಆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವುದಿಲ್ಲ. ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.

Exit mobile version