ಬೆಂಗಳೂರು: ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಒಂದೊಂದಾಗಿ ಖಾಸಗೀಕರಣಗೊಳಿಸುತ್ತಿದ್ದು, ಇದೀಗ ಕರ್ನಾಟಕದ @BJP4Karnataka ಸರ್ಕರವೂ ಕೂಡ ಇದೇ ಹಾದಿ ತುಳಿಯುತ್ತಿದೆ. ಬಿಎಂಟಿಸಿ ಸಂಸ್ಥೆಯ ಖಾಸಗೀಕರಣಕ್ಕೆ @BSYBJP @LaxmanSavadi ಮುಂದಾಗಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮೂಲಕ ದನಿ ಎತ್ತಿರುವ ಅವರು, ಬಿಎಂಟಿಸಿಗೆ ಗುತ್ತಿಗೆ ಆಧಾರದಲ್ಲಿ ಖಾಸಗಿ ಬಸ್ಗಳ ಖರೀದಿಗೆ ಟೆಂಡರ್ ಕರೆಯಲಾಗಿದ್ದು, 1,500 ಡೀಸೆಲ್ ಬಸ್ಗಳನ್ನು ಕಾರ್ಯಾಚರಣೆಗಿಳಿಸಲು ಸರ್ಕಾರ ಮುಂದಾಗಿದೆ. ಲೀಸ್ ಮಾದರಿಯಲ್ಲಿ ಖಾಸಗೀಕರಣಕ್ಕೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಿಎಂಟಿಸಿಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ನೌಕರರ ಭವಿಷ್ಯ ಅತಂತ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಬಸ್ಗಳ ಪ್ರವೇಶದಿಂದಾಗಿ ಬಿಎಂಟಿಸಿಗೆ ಮತ್ತಷ್ಟು ನಷ್ಟವಾಗಲಿದೆ. ಜತೆಗೆ ಭವಿಷ್ಯದಲ್ಲಿ ಇಡೀ ಸರ್ಕಾರಿ ಸಾರಿಗೆ ವ್ಯವಸ್ಥೆ ಖಾಸಗಿ ಪಾಲಾಗುವ ಆತಂಕ ಇದೆ. ನೌಕರರಿಗೆ ಸರಿಯಾಗಿ ಸಂಬಳ ಕೊಡಲಾಗದ ಸರ್ಕಾರ ಮುಂದಿನ ದಿನಗಳಲ್ಲಿ ಬಿಎಂಟಿಸಿ ಸಂಸ್ಥೆಯನ್ನೇ ಖಾಸಗಿಯವರಿಗೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ನೌಕರರು ಸಂಬಳ ಸೇರಿದಂತೆ ಹಲವು ಬೇಡಿಕೆಗಳನ್ನ ಮುಂದಿಟ್ಟು ಹೋರಾಟ ನಡೆಸಿದ್ದರು. ಅವರ ಬೇಡಿಕೆ ಈಡೇರಿಸೋ ಭರವಸೆ ನೀಡಿದ್ದ ಸರ್ಕಾರ ಈಗ ಬಿಎಂಟಿಸಿ ಖಾಸಗೀಕರಣಕ್ಕೆ ಮುಂದಾಗಿದೆ. ಇದೇ ಸ್ಥಿತಿಯನ್ನು ಕೆ ಎಸ್ ಆರ್ ಟಿ ಸಿ ಗೆ ತಂದರೂ ಆಶ್ಚರ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ನಷ್ಟದ ನೆಪವೊಡ್ಡಿ ಎಲ್ಲ ಸರ್ಕಾರಿ ಸಂಸ್ಥೆಗಳನ್ನೂ ಖಾಸಗಿಯವರಿಗೆ ಕೊಡುವುದು @BJP4India ಅಜೆಂಡಾ. ಕಾಂಗ್ರೆಸ್ ಇಷ್ಟು ವರ್ಷ ಕಟ್ಟಿ ಬೆಳೆಸಿದ ಸಂಸ್ಥೆಗಳನ್ನು ಖಾಸಗಿಯವರಿಗೆ ಕೊಡಲಾಗುತ್ತಿದೆ. ಸರ್ಕಾರಿ ಸಂಸ್ಥೆಗಳು ನಷ್ಟಕ್ಕೊಳಗಾದರೆ ಅವುಗಳನ್ನು ಸರಿ ಮಾಡುವ ಹೊಣೆ ಸರ್ಕಾರದ್ದು. ಅದರ ಬದಲು ಖಾಸಗಿ ಲಾಬಿಗೆ ಮಣಿದು ಖಾಸಗೀಕರಣ ಮಾಡುವುದಲ್ಲ ಎಂದು ಅವರು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

You May Also Like

ಆರೋಗ್ಯ ಸೇತು ಮೊಬೈಲ್ ಆಪ್ ಸುರಕ್ಷಾ ಕವಚ: ಡಾ.ಕೆ.ಸುಧಾಕರ್

ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ. ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು

ನೈತಿಕ ಮೌಲ್ಯದಿಂದ ಸುಂದರ ಭವಿಷ್ಯ- ಹೇಮಗಿರಿಮಠ

ಉತ್ತರಪ್ರಭ ಸುದ್ದಿಆಲಮಟ್ಟಿ: ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಭವಿಷ್ಯ ರೂಪಗೊಳ್ಳುತ್ತದೆ ಎಂದು ಪ್ರಾಚಾರ್ಯ ಪಿ.ಎ.ಹೇಮಗಿರಿಮಠ…

ಶಿಕ್ಷಣ ಸಚಿವರ ಫೇಸ್ ಬುಕ್ ಲೈವ್: ಎಸ್.ಎಸ್.ಎಲ್.ಸಿ ಪರೀಕ್ಷೆ ಗೊಂದಲ ನಿವಾರಣೆ

ಲಾಕ್ ಡೌನ್ ಹಿನ್ನೆಲೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಹತ್ತು ಹಲವು ಚರ್ಚೆಗಳು ನಡೆದಿದ್ದವು. ಇದಕ್ಕೆ ಸ್ವತ: ಶಿಕ್ಷಣ ಸಚಿವರೇ ಫೇಸ್ ಬುಕ್ ಲೈವ್ ಬರುವ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆ ಬಗ್ಗೆ ಇದ್ದ ಗೊಂದಲ ನಿವಾರಿಸಿದ್ದಾರೆ.

ಗದಗ ಜಿಲ್ಲೆಯ ಯಾವ ಗ್ರಾಮ ಪಂಚಾಯತಿಗೆ ಯಾರು ಆಡಳಿತಾಧಿಕಾರಿ

ಗದಗ:ಈಗಾಗಲೇ ಕೊರೊನಾ ಹಿನ್ನೆಲೆ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಪ್ರಕ್ರಿಯೇಯನ್ನು ಸರ್ಕಾರ ಮುಂದೂಡಿದೆ. ಆದರೆ…